ನನಗೆ ಸಚಿವ ಸ್ಥಾನ ಬೇಡ ಎಂದು ಸಿಎಂಗೆ ತಿಳಿಸಿದ್ದೇನೆ: ಕೆ.ಎಸ್.ಈಶ್ವರಪ್ಪ | JANATA NEWS

ಬೆಂಗಳೂರು : ನನಗೆ ಸಚಿವ ಸ್ಥಾನ ಬೇಡ, ಇನ್ನು ನನ್ನನ್ನು ಮಂತ್ರಿ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತಾ ಯಾರಿಗೂ ಕನಸು ಬಿದ್ದಿರಲಿಲ್ಲ. ಅವರು ಮಲಗಿದ್ದು ಒಂದು ಕಡೆ ಪತ್ರ ಸಿಕ್ಕಿದ್ದು ಮತ್ತೊಂದು ಕಡೆ ಆದರೂ ಈ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಬಂತು, ನಂತರ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆಯನ್ನೂ ನೀಡಬೇಕಾಯಿತು ಎಂದರು.
ಅದೃಷ್ಟವಶಾತ್ ಈ ಪ್ರಕರಣದ ತನಿಖೆ ನಂತರ ಕ್ಲೀನ್ ಚಿಟ್ ಸಿಕ್ಕಿತು. ನಂತರ ಸಚಿವ ಸ್ಥಾನ ನೀಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು, ಆದರೆ ಏನೇನು ಸಮಸ್ಯೆಗಳಿದೆಯೋ ಗೊತ್ತಿಲ್ಲ. ಪಕ್ಷ ಮತ್ತು ಸರ್ಕಾರಕ್ಕೆ ಸಮಸ್ಯೆ ಮಾಡಲು ನಾನು ತಯಾರಿಲ್ಲ, ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಕೂಡಾ ಸಿಎಂಗೆ ತಿಳಿಸಿ ಬಂದಿದ್ದೇನೆ.
ಈ ಹಿನ್ನಲೆ ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂ ಗೆ ಮನವಿ ಮಾಡಿದ್ದೆನೆ. ಮಾಡ್ತೀನಿ ಅಂತ ಭರವಸೆ ನೀಡಿದ್ರು.ಆದ್ರೆ ಈಗ ಅವರಿಗೆ ಏನೇನು ಸಮಸ್ಯೆ ಇದೀಯೋ ಅನ್ನೋದು ಗೊತ್ತಿಲ್ಲ . ಸಚಿವ ಸ್ಥಾನ ನನಗೆ ಬೇಡ ಎಂದೇ ಹೇಳಿದ್ದೇನೆ ಈಶ್ವರಪ್ಪ ತಿಳಿಸಿದರು.
ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತಾನಾಡಿದ ಈಶ್ವರಪ್ಪ , ಸಿಡಿ ವಿಚಾರ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಸಿಡಿ ವಿಚಾರವನ್ನು ಸಿಬಿಐಗೆ ವಹಿಸಲಿ, ತನಿಖೆಯಿಂದ ಎಲ್ಲವೂ ಹೊರಬರಬೇಕು. ಹಾಗಾಗಿ ಸರ್ಕಾರವೂ ಸಿಡಿ ಕೇಸ್ ಅನ್ನು ಸಿಬಿಐಗೆ ವಹಿಸಲಿ ಎಂದು ಮನವಿ ಮಾಡಿದ್ದಾರೆ.