ಪ್ರಹ್ಲಾದ್ ಜೋಶಿ ನಮ್ಮ ಬ್ರಾಹ್ಮಣರಲ್ಲ, ಅವರನ್ನು ಮುಂದಿನ ಸಿಎಂ ಮಾಡಲು ಬಿಜೆಪಿ ಹುನ್ನಾರ! | JANATA NEWS

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರನ್ನೇ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮುಂದಿನ ಸಿಎಂ ಮಾಡಲು ಆರ್ಎಸ್ಎಸ್ ನಿರ್ಧಾರ ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದಾಸರಹಳ್ಳಿ ಪಂಚರತ್ನಯಾತ್ರೆ ವೇಳೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಿಗೇ ಸಿಎಂ ಪಟ್ಟ ನೀಡಲಾಗುತ್ತದೆ. ಪ್ರಹ್ಲಾದ್ ಜೋಶಿಗೆ ಪಟ್ಟ ಕಟ್ಟಲು ಸಂಘ ಪರಿವಾರ ಪ್ಲಾನ್ ಮಾಡಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಆರ್ಎಸ್ ಎಸ್ ಪ್ರಮುಖರ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಪ್ರಸ್ತಾಪ ಆಗಿದ್ಯಂತೆ. ಪ್ರಹ್ಲಾದ್ ಜೋಶಿ ಸಿಎಂ ಆದ್ರೆ 8 ಜನ ಉಪಮುಖ್ಯಮಂತ್ರಿಯಾಗ್ತಾರೆ. ಯಾರು ಆ 8 ಉಪಮುಖ್ಯಮಂತ್ರಿಗಳು ಅನ್ನೋದನ್ನು ಆದಷ್ಟು ಬೇಗ ಹೇಳ್ತೀನಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಹೀಗಾಗಿ ನಿನ್ನೆಯಿಂದ ನಮ್ಮ ಮೇಲೆ ಗಧಾ ಪ್ರಹಾರ ಶುರು ಮಾಡಿದ್ದಾರೆ. ಅವರು ಶೃಂಗೇರಿ ಮಠ ಧ್ವಂಸ ಮಾಡಿದ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದವರು. ಅವರಿಗೆ ಸಂಸ್ಕೃತಿ ಇಲ್ಲ, ಸಂಸ್ಕೃತಿ ಬೇಕಿಲ್ಲ. ನಮ್ಮ ಭಾಗದ ಹಳೇ ಮೈಸೂರು ಭಾಗದ ಬ್ರಾಹ್ಮಣ ವರ್ಗಕ್ಕೆ ಸೇರಿದವರಲ್ಲ ಎಂದು ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶಭಕ್ತಿಯ ಹೆಸರಲ್ಲಿ ದೇಶಕ್ಕೆ ಕೊಡುಗೆ ಕೊಟ್ಟಂತವರನ್ನು ಮಾರಣಹೋಮ ಮಾಡುವಂತದ್ದು. ಈ ವರ್ಗದವರಿಂದ ಬಂದವರ ಕೃತ್ಯ. ರಾಜ್ಯದ ವೀರಶೈವ, ಒಕ್ಕಲಿಗ, ಹಿಂದುಳಿದ, ದಲಿತ ಸಮುದಾಯ ಬಿಜೆಪಿಯ ಆರ್ ಎಸ್ ಎಸ್ ಹುನ್ನಾರಕ್ಕೆ ಮರಳಾಗಬೇಡಿ. ಈ ರಾಜ್ಯವನ್ನು ಅವರು ಒಡೆಯುತ್ತಾರೆ. ಬಿಜೆಪಿಯ ಹುನ್ನಾರ RSS ಕುತಂತ್ರಕ್ಕೆ ಬಲಿಯಾಗಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.