ಜನತಾ ದಳ ಎನ್ನುವ ಬದಲು ಜಾತಿಯ ದಳ ಎಂದು ಹೆಸರು ಬದಲಿಸಿದರೆ ಒಳ್ಳೆಯದು | JANATA NEWS

ಕೋಲಾರ : ಜನತಾ ದಳ ಎನ್ನುವ ಬದಲು ಜಾತಿಯ ದಳ ಎಂದು ಹೆಸರು ಬದಲಿಸಿದರೆ ಒಳ್ಳೆಯದು ಎಂದು ಹೆಚ್.ಡಿ. ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.
ಬ್ರಾಹ್ಮಣ ಸಿಎಂ ವಿಚಾರವನ್ನು ಎತ್ತಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಗುಡುಗಿದ್ದಾರೆ.
ಪ್ರತೀ ಬಾರಿ ಲಾಟರಿ ಹೊಡೆಯಲು ಸಾಧ್ಯವಿಲ್ಲ. ಈ ಹಿಂದೆ ಕುಮಾರಸ್ವಾಮಿಗೆ ಲಾಟರಿ ಹೊಡೆದಿತ್ತು, ಹಾಗಾಗಿ ಅದೇ ವಾದ ಅವರದ್ದಾಗಿದೆ. ಬಿಜೆಪಿ ಪಕ್ಷದಲ್ಲಿ ಬ್ರಾಹ್ಮಣ ಸಿಎಂ ವಿಚಾರ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಇಂಥ ಚರ್ಚೆಗಳು ಎದುರಾಗಿದ್ದವು.
ಜಾತ್ಯತೀತ ನಾಯಕರೆನಿಸಿಕೊಂಡವರು ಜಾತಿ ಬಗ್ಗೆ ಮಾತನಾಡುವುದು ಸರಿಯಲ್ಲ. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡುವುದು ಬಿಜೆಪಿಯ ಸಿದ್ಧಾಂತವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ ಎಂದು ಹೇಳಿದರು.