ಕಬಡ್ಡಿ ಆಡುತ್ತಿದ್ದಾಗಲೇ ಹೃದಯಾಘಾತ, ವಿದ್ಯಾರ್ಥಿನಿ ಸಾವು! | JANATA NEWS

ಬೆಂಗಳೂರು : ಕಬಡ್ಡಿ ಆಡುತ್ತಿದ್ದ ವೇಳೆಯೇ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಗೊಂಡು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸಂಗೀತಾ (17) ಎಂದು ಗುರುತಿಸಲಾಗಿದೆ. ಧಾರವಾಡ ಮೂಲದ ಮೃತ ವಿದ್ಯಾರ್ಥಿನಿ ಸಂಗೀತ ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು.
ಕಬಡ್ಡಿ ಆಟ ಆಡುತ್ತಿದ್ದಾಗ ರೈಡ್ ಗೆ ವಿದ್ಯಾರ್ಥಿನಿ ಹೋಗಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯನ್ನು ವಿರುದ್ಧ ತಂಡದ ಆಟಗಾರರು ಹಿಡಿಯಲು ಹೋಗಿದ್ದಾರೆ. ಈ ವೇಳೆ ರೈಡರ್ ಆಗಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಹೃದಯಾಘಾತವಾಗಿದೆ.ತಕ್ಷಣವೇ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾಖಲಿಸುವಷ್ಟರಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.