ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ | JANATA NEWS

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ.
ಫೆಬ್ರವರಿ 24ರವರೆಗೆ ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ. ಇದರಿಂದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.
ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ತನಿಖಾಧಿಕಾರಿ ಫೆ.24ರೊಳಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಲಿ, ಅಲ್ಲಿಯವರೆಗೂ ಸಿಬಿಐ ತನಿಖೆ ಮುಂದುವರೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಗೆ ಸ್ವಲ್ಪ ದಿನಗಳ ಸಮಾಯವಕಾಶ ದೊರೆತಿದ್ದು, ಸದ್ಯ ನಿರಾಳರಾಗಿದ್ದಾರೆ.
ತಮ್ಮ ವಿರುದ್ಧದ ಕೇಸ್‌ನ ತನಿಖೆಗೆ ಮಧ್ಯಂತರ ತಡೆಯಾಜ್ಞೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನನ್ನ ವಿರುದ್ಧ 40 ಕೇಸ್ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಯಾವುದು ಎಂದು ವಕೀಲರ ಜೊತೆಗೆ ಮಾತನಾಡುತ್ತೇನೆ ಎಂದರು.