ಪುಲ್ವಾಮ ಕಪ್ಪು ದಿನ : ಕಾರ್ಟೂನ್ ಚಿತ್ರಗಳೊಂದಿಗೆ ಬಿಜೆಪಿಗೆ ಕಾಂಗ್ರೆಸ್ ನಿಂದ ವೇಲಟೈನ್ ಡೇ ಶುಭಾಶಯ | JANATA NEWS

ಬೆಂಗಳೂರು : ಪುಲ್ವಾಮ ದಾಳಿಯ ಕರಾಳ ದಿನದಂದು, ಪಾಶ್ಚಿಮಾತ್ಯ ಪ್ರೇಮಿಗಳ ದಿನವಾದ ವೇಲಟೈನ್ ಡೇ ಶುಭಾಶಯದೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಿಂದ, ಬಿಜೆಪಿಗರು ಶುದ್ಧ 40% ಪ್ರೇಮಿಗಳು ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪದ ಮೇಲೆ ಪೇ ಸಿಎಂ ಅಭಿಯಾನ ಮಾಡಿದ್ದ ಕಾಂಗ್ರೆಸ್, ಬಿಜೆಪಿ ವಿರುದ್ಧ ಮಾರ್ಮಿಕವಾಗಿ ಟ್ವೀಟ್ ಮಾಡಿದೆ.
ಬಿಜೆಪಿಗರು ಶುದ್ಧ 40% ಪ್ರೇಮಿಗಳು,
— Karnataka Congress (@INCKarnataka) February 14, 2023
40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!
ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ.....!!#40PercentLove pic.twitter.com/5DkQwfRvv3
ಈ ಕುರಿತಂತೆ ಇಂದು ಸರಣಿ ಟ್ವಿಟ್ ( Twitter ) ಮಾಡಿದ್ದು, ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!! ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ ಎಂದು ಹೇಳಿದೆ.
ಪ್ರೇಮದಲ್ಲಿ ಮುಳುಗಿದವರು ಸದಾ ಕಲ್ಪನಾಲೋಕದಲ್ಲಿ ವಿಹರಿಸುತ್ತಿರುತ್ತಾರೆ.
— INCKalyanKarnataka (@kalyan_inc) February 14, 2023
ಮತ್ತು ಆ ಭ್ರಮೆಗಳನ್ನೇ ವಾಸ್ತವ ಎಂದು ತಿಳಿದುಕೊಂಡಿರುತ್ತಾರೆ.
ಇದು ಪ್ರೇಮದ ಮೊದಲ ಹಂತ!#40PercentLove pic.twitter.com/2Z22fc6M9S
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನು ಭಿನ್ನವಾಗಿ ಚಿತ್ರಿಸಿ ಪೋಸ್ಟರ್ ಹಂಚಿಕೊಂಡಿದೆ.
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರ ಚಿತ್ರದ ಜೊತೆಗೆ ಹಚುವಿನ ಚಿತ್ವನ್ನು ಹಂಚಿಕೊಂಡು, "ಬಿಜೆಪಿಗರದ್ದು ಗೋ ಪ್ರೀತಿಯಲ್ಲ, Go ಪ್ರೀತಿ!! ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ!" ಎಂದಿದೆ.
ಸಂಸದ ತೇಜಸ್ವಿ ಸೂರ್ಯ ಅವರಿಗೆ ಟಾಂಗ್ ನೀಡಿರುವ ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು ಎಂದು ವ್ಯಂಗ್ಯ ಮಾಡಿದೆ. ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು. ಸಿಎಂ ಮನೆಗೆ ಕಲ್ಲು ಹೊಡೆಯುವುದು. ರೈತರಿಗೆ ಅವಮಾನಿಸುವುದು. ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ ಎಂದಿದೆ.
ಕನಸಲ್ಲೂ ನೀನೇ, ಮನಸಲ್ಲೂ ನೀನೇ, ಉಸಿರಲ್ಲೂ ನೀನೇ, ಹೆಸರಲ್ಲೂ ನೀನೇ..
— Karnataka Congress (@INCKarnataka) February 14, 2023
ಹೃದಯದ "ಆಕ್ಸಿಜನ್"!
ಕಮಿಷನ್ ಕೊಡಿಸುವ,
ಖಜಾನೆ ತುಂಬುವ "ಆಕ್ಸಿಜನ್" ಎಂದರೆ ಇವರಿಗೆ ಅದಮ್ಯ ಪ್ರೇಮ!!#40PercentLove pic.twitter.com/ELIlNGldBL
"ಪ್ರೀತಿ ಮಧುರ, ತ್ಯಾಗ ಅಮರ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಟಾಂಗ್ ನೀಡಿದೆ. ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ, ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ ಎಂದು ಟ್ವೀಟ್ ಮಾಡಿದೆ.
ಮಂಡ್ಯದಲ್ಲಿ ತಿರಸ್ಕಾರದ ಪ್ರೇಮ ವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು ಎಂದು ಹೇಳುವ ಮೂಲಕ ಕಂದಾಯ ಸಚಿವ ಆರ್. ಅಶೋಕ್ ಕಾಲೆಳೆದಿದೆ.
ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು,
— Karnataka Congress (@INCKarnataka) February 14, 2023
ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು.
ಸಿಎಂ ಮನೆಗೆ ಕಲ್ಲು ಹೊಡೆಯುವುದು.
ರೈತರಿಗೆ ಅವಮಾನಿಸುವುದು.
ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ!#40PercentLove pic.twitter.com/xkEzJxeIIB