Thu,Sep11,2025
ಕನ್ನಡ / English

ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ | JANATA NEWS

14 Feb 2023

ಚಿಕ್ಕಬಳ್ಳಾಪುರ : ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್​ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದು ಸ್ನೇಹಿತರು ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

ಕಳೆದ ಶನಿವಾರ ತನ್ನ ಸ್ನೇಹಿತನ ಕೆಎ 11 ಇಎಸ್ 9027 ನಂಬರಿನ ಡ್ಯೂಕ್ ಬೈಕ್ ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್​ನಲ್ಲಿ ತನ್ನ ಬೈಕ್ ನಿಲ್ಲಿಸಿ ಅಲ್ಲಿದ್ದ ಲಾಕ್​ರೂಂ ನಲ್ಲಿ ತನ್ನ ಹೆಲ್ಮೆಟ್ ಇಟ್ಟು ಸೀದಾ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಾಸ್ ಬಂದಿಲ್ಲ.

ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಾಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು ಪೊಲೀಸರಿಗೆ ತಿಳಿಸಿದ್ದು ಸಿ ಸಿ ಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರುವ ವಿಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವಿಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್ ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಇನ್ನೂ ಬ್ಯಾಗ್ ನಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ಡೆತ್ ನೋಟ್​ನಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲವಾದರೂ 'ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು' ಎಂಬ ಅಭಿಲಾಷೆ ಹೊರ ಹಾಕಿದ್ದಾನೆ ಎನ್ನಲಾಗಿದೆ.

RELATED TOPICS:
English summary :A young man commits suicide after falling from tipu drop in Nandibetta

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...