ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ, ಪ್ರೇಯಕರನೊಂದಿಗೆ ಸೇರಿ ಪತಿಯ ಹತ್ಯೆ | JANATA NEWS

ಮೈಸೂರು : ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪ್ರೇಯಕರನೊಂದಿಗೆ ಸೇರಿಕೊಂಡು ಪತ್ನಿಯೇ ಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಘಟನೆ ನಡೆದಿದೆ.
ಹೂಟಗಳ್ಳಿ ನಿವಾಸಿ ಮಂಜು ಕೊಲೆಯಾದ ವ್ಯಕ್ತಿ. ಪತ್ನಿ ಲಿಖಿತ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
12 ವರ್ಷಗಳ ಹಿಂದೆ ಲಿಖಿತ ಹಾಗು ಮಂಜು ಮದುವೆಯಾಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದರೂ, ಪತ್ನಿ ಲಿಖಿತಾ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ಹಿಂದೆ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು.
ನಂತರದಲ್ಲಿ ರಾಜಿ ಪಂಚಾಯಿತಿಯ ಮೂಲಕ ಮಂಜು ಪತ್ನಿಯನ್ನು ಮನೆಗೆ ಸೇರಿಸಿಕೊಂಡಿದ್ದ. ಈ ನಡುವೆ ಪತ್ನಿಯ ನಡವಳಿಕೆ ಬಗ್ಗೆ ಅನುಮಾನಗೊಂಡು ಮಂಜು, ಲಿಖಿತಳಾ ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಸಿಟ್ಟುಗೆದ್ದು ಪ್ರಿಯಕರನೊಂದಿಗೆ ಸೇರಿಕೊಂಡು ರಾತ್ರೋರಾತ್ರಿ ಪತಿಯನ್ನ ಉಸಿರುಗಟ್ಟಿಸಿ ಕೊಲೆಗೈದಿದ್ದಾಳೆ.
ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.