ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ, ಆರೋಪಿ ಆರೆಸ್ಟ್ | JANATA NEWS

ರಾಮನಗರ : ಪ್ರೀತಿ ನಿರಾಕರಿಸಿದಳು ಅಂತ ಕೆರಳಿದ ಯುವಕನೊಬ್ಬ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಆಸಿಡ್ ದಾಳಿ ನಡೆಸಿದ ಕ್ರೂರ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.
ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಸುಮಂತ್ (22) ಆಸಿಡ್ ಎರಚಿ, ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ
ತನ್ನ ಪ್ರೀತಿಗೆ ಒಪ್ಪಿಗೆ ನೀಡುವಂತೆ ವಿದ್ಯಾರ್ಥಿನಿಯನ್ನು ಯುವಕ ಹಿಂದಿನಿಂದಲೂ ಪೀಡಿಸಿ ಕಿರುಕುಳ ನೀಡುತ್ತಿದ್ದ. ನಿನ್ನೆ ಸಂಜೆಯೂ ಪ್ರೀತಿ ಒಪ್ಪಿಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಆದರೆ, ವಿದ್ಯಾರ್ಥಿನಿ ಒಲ್ಲೆ ಎಂದಾಗ ರಾಸಾಯನಿಕ ದ್ರವ ಎರಚಿ ಪರಾರಿಯಾಗಿದ್ದ.
ಗಾಯಾಳು ಬಾಲಕಿಯನ್ನು ಕೂಡಲೇ ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಯ ಎಡಗಣ್ಣಿನ ಭಾಗಕ್ಕೆ ಗಾಯವಾಗಿದೆ.
ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಆ್ಯಸಿಡ್ ದಾಳಿ ಸಂತ್ರಸ್ತೆಯನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ‍್ಧಿ ಸಚಿವ ಹಾಲಪ್ಪ ಆಚಾರ್, ಆರೋಗ್ಯ ವಿಚಾರಿಸಿದರು. ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಕಠಿಣ ಜರುಗಿಸಲಾಗುತ್ತದೆ ಎಂದು ಭರವಸೆ ನೀಡಿದರು.