ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಇಬ್ಬರು ಮಕ್ಕಳಿಗೆ ಬೆಂಕಿಯಿಟ್ಟು, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆ | JANATA NEWS

ಚಿಕ್ಕಬಳ್ಳಾಪುರ : ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು 37 ವರ್ಷದ ನೇತ್ರಾವತಿ, ಮಕ್ಕಳಾದ 12 ವರ್ಷದ ವರ್ಷಿತಾ ಮತ್ತು 9 ವರ್ಷದ ಸ್ನೇಹಾ ಎಂದು ಗುರುತಿಸಲಾಗಿದೆ. ಇವರಿಗೆ ಬೆಂಕಿ ಹಚ್ಚಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸೊನ್ನೇಗೌಡ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನಾ ಸ್ಥಳಕ್ಕೆ ಶಿಡ್ಲಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.