Sun,Oct26,2025
ಕನ್ನಡ / English

ಒಂದೇ ಕುಟುಂಬದ ನಾಲ್ವರ ಹತ್ಯೆ, ವಿಶೇಷ ಪೊಲೀಸ್ ತಂಡಗಳ ರಚನೆ, ತೀವ್ರಗೊಂಡ ತನಿಖೆ! | JANATA NEWS

25 Feb 2023

ಉತ್ತರಕನ್ನಡ : ಭಟ್ಕಳ ತಾಲೂಕಿನ ಹಾಡುವಳ್ಳಿಯ ಒಣಿಬಾಗಿಲು ಎನ್ನುವಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಭಟ್ಕಳ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಎಶಂಭು ಭಟ್ (65), ಅವರ ಪತ್ನಿ ಮಾದೇವಿ (60), ಮಗ ರಾಜೀವ್ (40) ಮತ್ತು ಸೊಸೆ ಕುಸುಮಾ (35) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.

ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಶಂಭು ಭಟ್ ಅವರ ಹಿರಿಯ ಸೊಸೆ ವಿದ್ಯಾ ಭಟ್ ಸಹೋದರ ವಿನಯ್ ಈ ಕೊಲೆ ಮಾಡಿದ್ದ ಎನ್ನಲಾಗಿದೆ.

ಶಂಭು ಭಟ್ಟರ ಹಿರಿಯ ಪುತ್ರ ಶ್ರೀಧರ ಶಂಭು ಭಟ್ಟ ಇವರು ಕಳೆದ ಕೆಲವು ಸಮಯದಿಂದ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದು ಸುಮಾರು ಆರು ತಿಂಗಳ ಹಿಂದೆ ಡಯಾಲಿಸಿಸ್ ಮಾಡುತ್ತಿರುವಾಗಲೇ ಕೊನೆಯುಸಿರೆಳೆದಿದ್ದರು. ಅವರ ಮರಣದ ದಿನದಿಂದಲೇ ಆಸ್ತಿ ಜಗಳ ಶುರುವಾಗಿದೆ.

ಹಿರಿಯ ಮಗ ಹಾಗೂ ಸೊಸೆ ಮೂಲ ಮನೆಯಲ್ಲಿಲ್ಲದೇ ತಮ್ಮ ಪೌರೋಹಿತ್ಯ ವೃತ್ತಿಗಾಗಿ ನಗರದಲ್ಲಿ ಮನೆ ಮಾಡಿಕೊಂಡಿದ್ದರು. ಮಗ ತೀರಿ ಹೋದ ನಂತರ ಸೊಸೆ ಇಲ್ಲಿಯೇ ಇದ್ದು ಆಕೆಯ ಸಹೋದರ ವಿನಯ ಈತನು ಆಗಾಗ ಹಾಡುವಳ್ಳಿಗೆ ಹೋಗಿ ಪಾಲು ಕೊಡುವಂತೆ ಜಗಳ ಮಾಡಿದ್ದರಿಂದ ಶಂಭು ಭಟ್ಟರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ತಾವು ಪತಿ-ಪತ್ನಿ ಹೀಗೆ ಆಸ್ತಿಯನ್ನು ಪಾಲು ಮಾಡಿ ಕೊಟ್ಟಿದ್ದರು.

ಶುಕ್ರವಾರ ಬೆಳಿಗ್ಗೆ ಕೊಟ್ಟಿಗೆ ಕಟ್ಟುತ್ತಿರುವ ಕುರಿತು ತಕರಾರು ಮಾಡಿದ್ದರೆನ್ನಲಾಗಿದೆ. ಬೆಳಿಗ್ಗೆಯಷ್ಟೇ ಕೊಟ್ಟಿಗೆ ವಿಚಾರವಾಗಿ ಜಗಳ ಆಗಿದ್ದು ಮಧ್ಯಾಹ್ನ ಈ ಬರ್ಬರ ಕೃತ್ಯ ನಡೆದು ಹೋಗಿದೆ. ಈಗಾಗಲೇ ದೂರು ನೀಡಿದಂತೆ ಹಿರಿಯ ಸೊಸೆ ವಿದ್ಯಾ ಹಾಗೂ ಆಕೆಯ ತಂದೆ ಶ್ರೀಧರ ಇವರ ಕುಮ್ಮಕ್ಕಿನಿಂದ ವಿನಯ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಕೊಲೆಯ ಹಿಂದೆ ಹಿರಿಯ ಸೊಸೆಯ ಪಾತ್ರವಿದೆ ಎಂದು ಪೊಲೀಸರು ಶಂಕಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಭಟ್ಕಳ ಡಿವೈಎಸ್ಪಿ ಮತ್ತು ಸಿಪಿಐ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ.

RELATED TOPICS:
English summary :Murder of four members of the same family, formation of special police teams, intensified investigation!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...