Tue,May14,2024
ಕನ್ನಡ / English

ಆಸ್ತಿಗಾಗಿ ತಂದೆ ಕೊಲೆಗೆ ಸಪಾರಿ ನೀಡಿದ್ದ ಮಗ ಸೇರಿ ಮೂವರ ಬಂಧನ | JANATA NEWS

27 Feb 2023
2479

ಬೆಂಗಳೂರು : ತಂದೆಯ ಕೊಲೆಗೆ ಮಗನೇ 1 ಕೋಟಿ ರೂ. ಸುಪಾರಿ ಕೊಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಮಗ ಮೂವರು ಆರೋಪಿಗಳನ್ನ ಮಾರತ್ ಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

70 ವರ್ಷದ ನಾರಾಯಣಸ್ವಾಮಿ ಎಂಬುವರ ಕೊಲೆಗೆ ಸುಪಾರಿ ನೀಡಿದ ಪುತ್ರ ಮಣಿಕಂಠ, ಸುಪಾರಿ ಪಡೆದ ರೌಡಿಶೀಟರ್ ಶಿವಕುಮಾರ್ ಹಾಗೂ ನವೀನ್ ಎಂಬುವರನ್ನ ಬಂಧಿಸಲಾಗಿದೆ.

ಪುತ್ರ, ತನ್ನ ತಂದೆ ನಾರಾಯಣಸ್ವಾಮಿಯ (70) ಕೊಲೆ ಮಾಡಿಸಲು 1 ಕೋಟಿ ರೂ. ಸುಪಾರಿ ನೀಡಿದ್ದ. ಆದರೆ ಅದರಲ್ಲಿ ವಿಚಿತ್ರ ವಿಚಾರ ಏನೆಂದರೆ ಕೇವಲ ಒಂದು ಲಕ್ಷ ಅಡ್ವಾನ್ಸ್ ಪಡೆದ ಹಂತಕರು ಅಪಾರ್ಟ್​ಮೆಂಟ್​ನ ಪಾರ್ಕಿಂಗ್ ಲಾಟ್​ನಲ್ಲಿ‌ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ‌ ಮಾಡಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುತ್ರ ಮಣಿಕಂಠನನ್ನ ವಶಕ್ಕೆ‌ ಪಡೆದು ವಿಚಾರಣೆ ನಡೆಸಿದಾಗ ಸುಪಾರಿ ನೀಡಿದ ಸಂಗತಿ ಬೆಳಕಿಗೆ ಬಂದಿತ್ತು. ಅಪ್ಪ-ಮಗನ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ ಮುಗಿಸಲು 1 ಕೋಟಿ ಸುಪಾರಿ ನೀಡಿ ಮಾತುಕತೆ ನಡೆಸಿ ಮುಂಗಡವಾಗಿ 1 ಲಕ್ಷ ನೀಡಿರುವುದು ಗೊತ್ತಾಗಿದೆ.

ಸುಪುತ್ರ ಮಣಿಕಂಠ 2013ರಲ್ಲಿ ತನ್ನ ಪತ್ನಿಯನ್ನ ಕೊಲೆ ಮಾಡಿದ್ದ. ಕಳೆದ ಐದು ತಿಂಗಳ ಹಿಂದೆ ಈತನ ವಿರುದ್ಧ ಮಾರತ್ ಹಳ್ಳಿ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಜಾಮೀನು ಪಡೆದು ಹೊರಬಂದು ಎರಡನೇ ವಿವಾಹವಾಗಿ ಒಂದು ಹೆಣ್ಣು ಮಗುವಿದೆ.ಹೀಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ‌. ಈ ವಿಚಾರ ಗೊತ್ತಾಗುತ್ತಿದ್ದಂತೆ ಎರಡನೇ ಪತ್ನಿ ಮಣಿಕಂಠನಿಂದ ದೂರವಾಗಿ ವಿಚ್ಚೇದನದ ಮಾತುಕತೆ ನಡೆಯುತಿತ್ತು.

ಇದನ್ನು ತಿಳಿದ ನಾರಾಯಣಸ್ವಾಮಿ ತನ್ನ ಹೆಸರಿನಲ್ಲಿದ್ದ ಪ್ಲ್ಯಾಟ್ ನ್ನ ಸೊಸೆಗೆ ರಿಜಿಸ್ಟರ್ ಮಾಡಲು ಮುಂದಾಗಿದ್ದ. ತಂದೆ ಕೊಂದರೆ ಆಸ್ತಿ ತನ್ನ ಹೆಸರಿಗೆ ಇರುತ್ತೆ ಸುಖವಾಗಿ ಇರಬಹುದು ಎಂದು ಪ್ಲಾನ್ ಮಾಡಿದ ಮಣಿಕಂಠ ತಂದೆಯ ಹತ್ಯೆಗೆ ಸುಪಾರಿ ನೀಡಿದ್ದ.

RELATED TOPICS:
English summary :Arrest of three including the son, whose father had offered to kill him for property

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...