ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ | JANATA NEWS

ಬೆಂಗಳೂರು : ಮನೆಯ ಆವರಣದಲ್ಲಿದ್ದ ವಿದ್ಯುತ್ ಕಂಬ ತೆರವು ಮಾಡುವ ಸಲುವಾಗಿ 25 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಕಸ್ತೂರಿನಗರ ಕಾರ್ಯಾಚರಣೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಎಂಜಿನಿಯರ್ ವಿದ್ಯಾ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್. ಬೆಂಗಳೂರಿನ ಕಸ್ತೂರಿನಗರ ಸಬ್ಡಿವಿಷನ್ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ. ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಸಹಾಯಕ ಎಂಜಿನಿಯರ್ ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ಅರವಿಂದ್ ದೂರು ನೀಡಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ. ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿರುವ ಲೋಕಾಯುಕ್ತ ಪೊಲೀಸರು ಬೆಸ್ಕಾಂ ಇಒ ವಿದ್ಯಾರನ್ನು ವಶಕ್ಕೆ ಪಡೆದಿದ್ದಾರೆ.