ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ | JANATA NEWS

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಢದಲ್ಲಿ ನಿರ್ಮಾಣವಾಗಿರುವ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ನೆರವೇರಿಸಿ ತುಂಬಾ ಸಂತೋಷವಾಗಿದೆ. ಪ್ರವಾಸೋದ್ಯಮಕ್ಕೆ ನಮ್ಮ ಸರ್ಕಾರ ಹೆಚ್ಚಿನ ಉತ್ತೇಜನ ನೀಡಿದೆ.
ಸಿದ್ದರಾಮಯ್ಯ ಅವರು 2013- 2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರೂ ನಾಳೆ ಅವರನ್ನೇ ಕರೆತಂದು ಶಿವಾಜಿ ಮೂರ್ತಿ ಉದ್ಘಾಟನೆ ಮಾಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.
ಹೊಯ್ಸಳರು, ಕದಂಬರು ಹಾಗೂ ಮೂಲ ಶಿಲ್ಪಕಲೆ ಇರುವಂತಹ ಸ್ಥಳಗಳನ್ನು ನಾವು ರಕ್ಷಣೆ ಮಾಡುತ್ತೇವೆ. ಜೊತೆಗೆ ಕಾರಿಡಾರ್ ನಿರ್ಮಾಣ ಮಾಡಲು ವಿಶೇಷ ಅನುದಾನವನ್ನು ಬಜೆಟ್ನಲ್ಲಿ ಮೀಸಲಿಡಲಾಗಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದರು.
ನಮ್ಮ ಸರಕಾರದ ಅವಧಿಯಲ್ಲಿ ಇಲ್ಲಿನ ಕೋಟೆ ಅಭಿವೃದ್ಧಿಗೆ 5. ಕೋಟಿ ರೂ. ಮೂರ್ತಿ ಪ್ರತಿಷ್ಠಾಪನೆಗೆ 50 ಲಕ್ಷ ರೂ. ಕೊಟ್ಟಿದ್ದೇವೆ ಎಂದು ಹೇಳಿದರು. ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 2008 ರಲ್ಲಿ ಸಿಎಂ ಯಡಿಯೂರಪ್ಪ ಅವರು 14 ಕೋಟಿ ರೂಪಾಯಿ ಮಂಜೂರು ಮಾಡಿದರು. ಜನಾರ್ದನ ರೆಡ್ಡಿ ಅವರು ಅಂದಿನ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು. ಶಾಸಕ ಸಂಜಯ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೋಟೆಯ ಆವರಣದಲ್ಲಿ ಮೂಲಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಕೋಟೆ ಅಭಿವೃದ್ದಿಗೆ ನಿಗದಿಯಾಗಿರುವ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ನೀಡಲಾಗುವದು ಎಂದು ಪ್ರಕಟಿಸಿದರು.
ಇನ್ನೂ ಮಾರ್ಚ್ 5 ರಂದು ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತ್ತೊಮ್ಮೆ ಶಿವಾಜಿ ಮೂರ್ತಿ ಉದ್ಘಾಟಿಸುತ್ತಿರುವ ಕುರಿತು ಮಾತನಾಡಿ, ಇದು ಸರಕಾರಿ ಕಾರ್ಯಕ್ರಮ, ಹಾಗಾಗಿ ಉದ್ಘಾಟನೆಯ ದಿನವನ್ನು ನಾವು ನಿರ್ಧಾರ ಮಾಡುತ್ತೇವೆ. ಇಂದು ಉದ್ಘಾಟನೆಯಾಗಿದೆ. ಮತ್ತೊಮ್ಮೆ ಉದ್ಘಾಟನೆ ಮಾಡಲು ಬರುವುದಿಲ್ಲ. ಅವರ ಪಕ್ಷದ ಕಾರ್ಯಕ್ರಮ ಬೇಕಿದ್ದರೆ ಮಾಡಿಕೊಳ್ಳಲಿ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಅನೀಲ ಬೆನಕೆ, ಅಭಯ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಎಂ.ಜಿ ಹಿರೇಮಠ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಉಪಸ್ಥಿತರಿದ್ದರು.
ಇಂದು ಬೆಳಗಾವಿ ಜಿಲ್ಲೆಯ ರಾಜಹಂಸಗಢದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಹಾಗೂ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದೆನು. pic.twitter.com/AaZcABdkG3
— Basavaraj S Bommai (@BSBommai) March 2, 2023