ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ವಿರೂಪಾಕ್ಷಪ್ಪ ಮಾಡಾಳ್ ರಾಜೀನಾಮೆ | JANATA NEWS

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷ ವಿರೂಪಾಕ್ಷಪ್ಪ ಮಾಡಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ಚೆನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ರನ್ನು ಲಂಚ ಸ್ವೀಕಾರ ಮಾಡ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲ, ಇವರಿಗೆ ಸೇರಿದ 8.12 ಕೋಟಿ ಹಣವನ್ನು ಸೀಜ್ ಮಾಡಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ತರಿಸಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ತರಿಸಿದೆ. ಹಣ ಸಿಕ್ಕಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದು, ಮಾಡಾಳ ವಿರೂಪಾಕ್ಷಪ್ಪ ಅವರಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ಪುತ್ರ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೆ ಶಾಸಕ ವಿರೂಪಾಕ್ಷಪ್ಪ ಅವರು ಕೆಎಸ್ಡಿಎಲ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
"ನಿನ್ನೆ ನಡೆದ ದಾಳಿಗೂ ನನಗೂ ಸಂಬಂಧವಿಲ್ಲ. ಇದು ನನ್ನ ಕುಟುಂಬದ ವಿರುದ್ಧ ಷಡ್ಯಂತ್ರವಾಗಿದೆ. ಆದರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆ ಅಂಗೀಕರಿಸಬೇಕು" ಎಂದು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರದಲ್ಲಿ ವಿರೂಪಾಕ್ಷಪ್ಪ ಮಾಡಾಳ್ ಮನವಿ ಮಾಡಿದ್ದಾರೆ.