ಬೆಂಗಳೂರಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾ ಪತ್ತೆ, 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ವಶ | JANATA NEWS

ಬೆಂಗಳೂರು : ಆಂಧ್ರಪ್ರದೇಶದಿಂದ ಮಾದಕವಸ್ತು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಡಿ.ಜೆ ಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನವಾಜ್ ಖಾನ್ ಹಾಗೂ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಇವರಿಂದ ಬರೋಬ್ಬರಿ 2.47 ಕೋಟಿ ಮೌಲ್ಯದ 415 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನೂ ಬಂಧಿಸಿದ್ದಾರೆ.
ಆರೋಪಿಗಳು ಆಂಧ್ರಪ್ರದೇಶದಿಂದ ಗಾಂಜಾ ತಂದು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶೇಖರಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಈ ವೇಳೆ ಆರೋಪಿ ಅಬ್ದುಲ್ ರೆಹಮಾನ್ನ್ನು ಬಂಧಿಸಿದ್ದಾರೆ.
English summary :A large amount of cannabis was found in Bangalore, cannabis worth more than 2 crores was seized