ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ | JANATA NEWS

ಬೆಂಗಳೂರು : ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ತಂಡ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿ ತೌಫಿಲ್ ಎಂಬಾತ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ತಡರಾತ್ರಿ ಸೆರೆ ಸಿಕ್ಕಿದ್ದಾನೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
ಕಳೆದ ಐದಾರು ತಿಂಗಳಿಂದ ಆರೋಪಿ ತೌಫಿಲ್ ಅಮೃತಹಳ್ಳಿಯ ಮಾರುತಿ ಲೇಔಟ್‌ನಲ್ಲಿ ವಾಸವಿದ್ದ. ಆರೋಪಿಯು ಬೆಂಗಳೂರಿನಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಹತ್ತಕ್ಕೂ ಅಧಿಕ ಅಧಿಕಾರಿಗಳನ್ನೊಳಗೊಂಡ ತಂಡ ಮೊದಲು ತೌಫಿಲ್ ಮನೆಯೊಳಗೆ ಇರುವುದನ್ನು ಖಚಿತಪಡಿಸಿಕೊಂಡಿದೆ.
NIA ಅಧಿಕಾರಿಗಳು ಆಟೋ ಚಾಲಕ, ಫ್ಲಂಬರ್ ವೇಷದಲ್ಲಿ ತೌಫಿಲ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿ ಮಟನ್ ಕತ್ತರಿಸುತ್ತಿದ್ದ ಆರೋಪಿ ಎನ್ಐಎ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಷ್ಟರಲ್ಲಿ ತೌಫಿಲ್ ಅನ್ನು NIA ಅಧಿಕಾರಿಗಳು ಲಾಕ್ ಮಾಡಿದ್ದಾರೆ. ಸದ್ಯ ತೌಫಿಲ್ ಅನ್ನು ವಶಕ್ಕೆ ಪಡೆದ NIA ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.