ಮೈಸೂರು ಬೆಂಗಳೂರು ದಶಪಥ ರಸ್ತೆ ಕ್ರೆಡಿಟ್ ಕಾಂಗ್ರೆಸ್‌ಗೆ ಸಲ್ಲಬೇಕು: ಸಿದ್ದರಾಮಯ್ಯ | JANATA NEWS

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು - ಬೆಂಗಳೂರು ನಡುವಿನ ದಶಪಥ ಹೆದ್ದಾರಿಯನ್ನು ಮಾರ್ಚ್.9ರಂದು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಈ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ರಸ್ತೆ ನಿರ್ಮಾಣದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗು ಬಿಜೆಪಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಹೇಳಿದ್ದಾರೆ.
ಪ್ರತಾಪ್ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲವು ಕಿಲೋಮೀಟರ್ ರಸ್ತೆ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹೆಚ್.ಸಿ.ಮಹದೇವಪ್ಪನವರಿಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನವರು ಮುಂದೆ ನಿಂತು ಈ ರಸ್ತೆಯನ್ನು ಮಾಡಿಸಿದರು ಎಂದರು.
ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ಒಂದು ವೇಳೆ ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದ್ದಷ್ಟೆ. ಲೋಕಾಯುಕ್ತದ ಯಾವ ಅಧದಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಆಡಳಿತ ಕಾಲದಲ್ಲೂ ಲೋಕಾಯುಕ್ತ ಇತ್ತು. ಎಲ್ಲಾ ಸತ್ಯ ಗೊತ್ತಿದ್ದರು ಸಿಎಂ ಬೊಮ್ಮಯಿ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು.