Tue,May21,2024
ಕನ್ನಡ / English

ಹಲವು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ: ಯಾರಿರಬಹುದು ಲಿಸ್ಟ್‌ ಅಲ್ಲಿ? | JANATA NEWS

07 Mar 2023
1706

ಕಲಬುರಗಿ : ಬಿಜೆಪಿಯು ಸಹ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಗೊಳಿಸುತ್ತಿದೆ. ಇಂದು ಕಲಬುರಗಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಮಾತನಾಡಿದ ಮಾಜಿ ಸಿಂಎ ಬಿ ಎಸ್ ಯಡಿಯೂರಪ್ಪ, 'ನಾಲ್ಕರಿಂದ ಆರು ಬಿಜೆಪಿ ಶಾಸಕರು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಅನ್ನು ಕಳೆದುಕೊಳ್ಳಲಿದ್ದಾರೆ' ಎಂದು ತಿಳಿಸಿದ್ದಾರೆ.

ಬಿಜೆಪಿ ಉಮೇದುವಾರರ ಮೊದಲ ಪಟ್ಟಿ ಆದಷ್ಟು ಬೇಗ ಪ್ರಕಟಗೊಳ್ಳಲಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಕಾಂಗ್ರೆಸ್ ಪಕ್ಷದ ಪ್ರಜಾದನಿ ಯಾತ್ರೆಯಲ್ಲಿ ಜನರು ಸೇರುತ್ತಿಲ್ಲ. ಮತ್ತೊಂದೆಡೆ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಾಕಷ್ಟು ಜನರು ಸೇರುತ್ತಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ ಎಂಬುದನ್ನು ಸಾಬೀತುಪಡಿಸುವಂತಿದೆ ಎಂದರು.

ಇತ್ತೀಚೆಗೆ ನಡೆದ ತ್ರಿಪುರಾ, ಮೇಘಾಲಯ ಚುನಾವಣೆಯಲ್ಲಿ ಬಿಜೆಪಿ ಶಕ್ತಿ ಏನು ಎಂಬುದು ಸಾಬೀತಾಗಿದೆ. ಇದರ ಜೊತೆಗೆ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿರುವುದು ಮತ್ತೊಮ್ಮೆ ದೃಢಪಟ್ಟಿದೆ ಎಂದರು.

ಈಗಿರುವ ನಾಲ್ಕರಿಂದ ಆರು ಹಾಲಿ ಶಾಸಕರಿಗೆ ಟಿಕೆಟ್‌ ಸಿಗುವುದಿಲ್ಲ. ಉಳಿದಂತೆ ಬಹುತೇಕ ಶಾಸಕರಿಗೆ ಟಿಕೆಟ್‌ ದೊರೆಯಲಿದೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ನಾವು ಮೊದಲು ಸ್ಪಷ್ಟ ಬಹುಮತ ಪಡೆಯಬೇಕಿದೆ. ಆ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸುತ್ತೇವೆ' ಎಂದು ಯಡಿಯೂರಪ್ಪ ಹೇಳಿದರು.

ಕನಿಷ್ಠ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವು ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿಯ ಉನ್ನತ ನಾಯಕರೊಂದಿಗೆ ಚರ್ಚಿಸಿದ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ.

RELATED TOPICS:
English summary :It is difficult for many sitting BJP MLAs to get tickets: Who can be on the list?

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...