ಕೆರೆಯಲ್ಲಿ ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವಪತ್ತೆ | JANATA NEWS
ಕೋಲಾರ : ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವಪತ್ತೆಯಾದ ಘಟನೆ ಕೋಲಾರ ತಾಲ್ಲೂಕಿನ ಮುದುವಾಡಿ ಬಳಿಯ ತೊಂಡಾಲ ಗ್ರಾಮದ ಕೆರೆಯಲ್ಲಿ ಬೆಳಕಿಗೆ ಬಂದಿದೆ.
ಸುಟ್ಟ ಸ್ಥಿತಿಯಲ್ಲಿ ಶ್ರೀನಿವಾಸಪುರದ ಶೋಭಾ (37) ಎಂಬ ಮಹಿಳೆಯ ಮೃತದೇಹ ಎಂದು ಗುರುತಿಸಲಾಗಿದೆ. ಮಹಿಳೆ ಶೋಭಾ ಶ್ರೀನಿವಾಸಪುರದಲ್ಲೇ ಬ್ಯೂಟಿಪಾರ್ಲರ್ ನಡೆಸುತ್ತಿದ್ದರು ಎಂದು ಹೇಳಲಾಗಿದೆ.
ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
English summary :Half-burnt woman found dead in lake