ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ | JANATA NEWS

ಬೆಂಗಳೂರು : ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿರುವಂತಹ ಘಟನೆ ಜಿಲ್ಲೆಯ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಕಂಬಳಿಪುರ ನಿವಾಸಿ ವೇಣುಗೋಪಾಲ್ ಎಂಬುವವರ 6 ತಿಂಗಳ ಮೃತಪಟ್ಟ ಮಗು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 15 ದಿನಗಳಿಂದ ಹೊಟ್ಟೆ ನೋವಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಓವರ್ ಡೋಸ್ ನೀಡಿದ್ದರಿಂದ ಮಗು ಮೃತಪಟ್ಟಿದೆ. ಈ ವೇಳೆ ಮಗುವಿಗೆ ಓವರ್ ಡೋಸ್ ನೀಡಲಾಗಿದ್ದು ವೈದ್ಯರ ನಿರ್ಲಕ್ಷ್ಯವೇ ಮಗುವಿನ ಕಾರಣ ಎಂದು ಪೋಷಕರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.
ಮಗುವಿನ ಸಾವಿನ ನಂತರ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಪೋಷಕರು, ಸಂಬಂಧಿಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.