ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ನಿಧನ : ಗಣ್ಯರ ಸಂತಾಪ | JANATA NEWS

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಇಂದು ಶನಿವಾರ ಬೆಳಗ್ಗೆ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಡಿಆರ್‌ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಕಾಂಗ್ರೆಸ್ ನಾಯಕನ ನಿಧನವನ್ನು ಖಚಿತಪಡಿಸಿದ್ದಾರೆ.
"ಆರ್.ಧ್ರುವನಾರಾಯಣ ಎದೆನೋವು ಎಂದು ದೂರಿದರು, ಮತ್ತು ಅವರ ಚಾಲಕ ಅವರನ್ನು ಬೆಳಿಗ್ಗೆ 6.40 ರ ಸುಮಾರಿಗೆ ಆಸ್ಪತ್ರೆಗೆ ಕರೆತಂದರು. ಆದರೆ ಅವರು ಬದುಕುಳಿಯಲಿಲ್ಲ" ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಧ್ರುವಯ್ಯನವರ ನಿಧನಕ್ಕೆ ಸಂಸದ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಕೇಂದ್ರ ನಾಯಕರು ಸಂತಾಪ ಸೂಚಿಸಿದ್ದು, ಇದು ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಇಂದು ರದ್ದುಗೊಳಿಸಿದೆ.
ಧ್ರುವನಾರಾಯಣ ಅವರು 2009-2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು.