ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: ಮಿಥುನ್ ರೈ ಹೇಳಿಕೆಗೆ ರಕ್ಷಿತ್ ಶೆಟ್ಟಿ ತಿರುಗೇಟು | JANATA NEWS

ಬೆಂಗಳೂರು : ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ನಾಯಕ ಮಿಥುನ್ ರೈ ಅವರು ಉಡುಪಿ ಮಠದ ಜಾಗದ ವಿಚಾರದಲ್ಲಿ ನೀಡಿದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಮಿಥುನ್ ರೈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು.
ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ಈ ವಿಚಾರದಲ್ಲಿ ಟ್ವೀಟ್ ಮಾಡಿದ್ದು, ಕಿಡಿಕಾರಿದ್ದಾರೆ. 'ಗೊತ್ತಿಲ್ಲದ ವಿಚಾರದಲ್ಲಿ ಅಸಂಬದ್ಧ ಹೇಳಿಕೆ ಏಕೆ' ಎಂದು ಮಿಥುನ್ ರೈ ಹೆಸರು ಉಲ್ಲೇಖಿಸದೇ ಪ್ರಶ್ನೆ ಮಾಡಿದ್ದಾರೆ.
ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ ಇಲ್ಲದಿದ್ದರೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿ ಮಾತಾಡೋದು ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.