Sat,May18,2024
ಕನ್ನಡ / English

ದಶಪಥ ಹೆದ್ದಾರಿ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಬೇಕೆಂಬ ಕನಿಷ್ಟ ಸೌಜನ್ಯ ಇಲ್ಲವೇ? | JANATA NEWS

12 Mar 2023
2058

ಬೆಂಗಳೂರು : ದಶಪಥ ಹೆದ್ದಾರಿ ಉದ್ಘಾಟನೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ ನಾನು ತಮಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ ಎಂದು ಸಂಸದ ಡಿ.ಕೆ ಸುರೇಶ್ ಟ್ವೀಟ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಾನ್ಯ ಪ್ರಧಾನ ಮಂತ್ರಿಗಳೇ, ತಾವು ಈ ದಿನ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟಿಸಿದ್ದೀರಿ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ ತಮಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ.

ಈ ರಾಷ್ಟ್ರೀಯ ಹೆದ್ದಾರಿಯ ಬಹುಭಾಗವು ನಾನು ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾದುಹೋಗಿದ್ದು, ಇಲ್ಲಿನ ಜನತೆ ನನ್ನನ್ನು ತಮ್ಮ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಿಮ್ಮ ಕ್ಷುಲ್ಲಕ ರಾಜಕಾರಣವು ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆಮಾಚಿದೆ ಎಂದಿದ್ದಾರೆ. ಈ ರಾಷ್ಟ್ರೀಯ ಹೆದ್ದಾರಿಯ ಸುಮಾರು ಶೇ. 30 ರಷ್ಟುಕಾಮಗಾರಿಯು ಇನ್ನೂ ಬಾಕಿ ಇರುವುದು ನಿಮ್ಮ ಗಮನದಲ್ಲಿದೆ ಎಂದು ಭಾವಿಸಿದ್ದೇನೆ.

ಆದರೂ ನೀವು ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್ ಗಾಗಿ ಇಂದು ಉದ್ಘಾಟಿಸಿದ್ದೀರಿ. 2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಲು ಮೊದಲು ಪ್ರಸ್ತಾವನೆ ಸಲ್ಲಿಸಿದ್ದನ್ನು ತಮಗೆ ನೆನಪಿಸಬಯಸುತ್ತೇನೆ.

ಅಲ್ಲದೇ ರೈತರ ಭೂಮಿ ಸುಗಮ ಸ್ವಾಧೀನಕ್ಕೆ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತರದೇ ಹೋಗಿದ್ದರೆ ಈ ಯೋಜನೆ ಇಷ್ಟು ಸುಲಭವಾಗಿ ಕಾರ್ಯಸಾಧು ಆಗುತ್ತಿರಲಿಲ್ಲ ಎಂಬುದನ್ನು ನಾವು ಮರೆಯಬಾರದು. ಇದರ ಸಂಪೂರ್ಣ ಶ್ರೇಯಸ್ಸು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಲ್ಲಬೇಕು ಎಂದು ತಿಳಿಸಿದ್ದಾರೆ.

ಇನ್ನು ಕೇಂದ್ರಕ್ಕೆ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ದೊಡ್ಡ ರಾಜ್ಯ ಕರ್ನಾಟಕದ ಸುಮಾರು 5,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯು ಪ್ರಧಾನಿ ಕಚೇರಿ ಹಾಗೂ ನೀತಿ ಆಯೋಗದ ಮುಂದೆ ಕಳೆದ 8 ವರ್ಷಗಳಿಂದ ಧೂಳು ಹಿಡಿಯುತ್ತಾ ಕೂತಿದೆ. ಈ ಕುರಿತು ನಿಮ್ಮ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕರ್ನಾಟಕ ಅಭಿವೃದ್ಧಿ ವಿರುದ್ದದ ನಿಮ್ಮ ನಿಲುವು ಹಾಗೂ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿ.

ಕರ್ನಾಟಕದ ಅಪೂರ್ಣ ಯೋಜನೆಗಳನ್ನು ಉದ್ಘಾಟಿಸುತ್ತಿರುವುದು ಕರ್ನಾಟಕದ ಜನತೆಯನ್ನು ಹೇಗಾದರೂ ವಂಚಿಸಿ ಚುನಾವಣಾ ಗೆಲುವು ಸಾಧಿಸಬಹುದು ಎನ್ನುವ ನಿಮ್ಮ ಹತಾಶ ಪ್ರಯತ್ನಕ್ಕೆ ಹಿಡಿದ ಕೈಗನ್ನಡಿ. ನಿಮ್ಮ ಈ ವಿಕೃತ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ. ಎಂದು ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದಾರೆ.

RELATED TOPICS:
English summary :Do not you at least have the courtesy to invite me to the inauguration of the Daspatha highway?

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...