ಮೈಸೂರು - ಬೆಂಗಳೂರು ನೂತನ ಎಕ್ಸಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ | JANATA NEWS

ಬೆಂಗಳೂರು : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿವೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
English summary :A terrible accident on the Mysore-Bangalore new express highway