ಟಿಪ್ಪುವನ್ನು ಕೊಂದ ಉರಿಗೌಡ, ನಂಜೇಗೌಡರ ಶಾಶ್ವತ ದ್ವಾರ ನಿರ್ಮಿಸುತ್ತೇವೆ: ಸಿ ಟಿ ರವಿ ಹೇಳಿಕೆ | JANATA NEWS

ವಿಜಯಪುರ : ಉರಿಗೌಡ, ನಂಜೇಗೌಡರ ದ್ವಾರವನ್ನು ಏಕೆ ತೆರವುಗೊಳಿಸಿದ್ದಾರೋ ಗೊತ್ತಿಲ್ಲ. ಆದರೆ, ಅವರಿಬ್ಬರ ಶಾಶ್ವತ ದ್ವಾರ ನಿರ್ಮಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು.
ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.
ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು.