Fri,Mar31,2023
ಕನ್ನಡ / English

ಮೆಂಟಲ್ ಗಿರಾಕಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ಜಾರಕಿಹೊಳಿಗೆ ಡಿ.ಕೆ.ಶಿ ತಿರುಗೇಟು | JANATA NEWS

13 Mar 2023
424

ಬೆಂಗಳೂರು : ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿಡಿ ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ತಿರುಗೇಟು ನೀಡಿದರು.

ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, 'ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ' ಎಂದರು.

ಪಕ್ಷದ ಟಿಕೆಟ್ ಪಟ್ಟಿ ಅಂತಿಮವಾಗುವುದು ಯಾವಾಗ ಎಂದು ಕೇಳಿದಾಗ, 'ಮಾ.16 ರಂದು ಇಲ್ಲಿ ಒಂದು ಸಭೆ ಕರೆದಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ' ಎಂದು ತಿಳಿಸಿದರು.

RELATED TOPICS:
English summary :Does not respond to mental customers: DK Shi attack on Jarakiholi

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...