Sun,May19,2024
ಕನ್ನಡ / English

ಮಹಿಳಾ ASI ಜೊತೆ IPS ಅಧಿಕಾರಿ ಅಕ್ರಮ ಸಂಬಂಧ ಆರೋಪ, ಪತಿಯಿಂದ ದೂರು! | JANATA NEWS

13 Mar 2023
3630

ಕಲಬುರ್ಗಿ : IPS ಅಧಿಕಾರಿ ಅರುಣ್ ರಂಗರಾಜನ್​ ಅವರು ಮಹಿಳಾ ASI ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕಲಬುರ್ಗಿಯಲ್ಲಿರುವಂತ ಪಿಡಬ್ಲ್ಯೂ ಡಿ ಕ್ವಾಟ್ರಾಸ್ ನಲ್ಲಿಯೇ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಹಾಗೂ ಮಹಿಳಾ ಎಎಸ್‌ಐ ಜೊತೆಗೆ ಅರೆ ಬೆತ್ತಲೆಯಾಗಿರುವುದನ್ನು ಕಂಡ ಹೆಡ್ ಕಾನ್ಸ್ ಸ್ಟೇಬಲ್ ಗಂಡನೇ ಶಾಕ್ ಆಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಡ್ ಕಾನ್ಸ್ ಸ್ಟೇಬಲ್ ಗಂಡ ಎಸ್ಪಿಗೆ ದೂರು ನೀಡಿದ್ದಾರೆ.

ಜಿಲ್ಲೆಯ ISD ವಿಭಾಗದಲ್ಲಿ ಕಳೆದ 3 ವರ್ಷಗಳಿಂದ ಈ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್​ಐ ಜೊತೆ ಐಪಿಎಸ್​ ಅರುಣ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿಂದೆಯು ಇಬ್ಬರು ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿ ಹಾಕಿಕೊಂಡಿದ್ದರು. ಹೀಗಾಗಿ ಎರಡ್ಮೂರು ಬಾರಿ ಪತ್ನಿಗೆ ಹಾಗೂ ಐಪಿಎಸ್ ಅಧಿಕಾರಿಗೆ ಪತಿ ತಿಳಿ ಹೇಳಿದ್ದರು.

ಈ ಸಂಬಂಧ ಹೆಡ್ ಕಾನ್ಸ್ ಸ್ಟೇಬಲ್ ಕಂಟೆಪ್ಪ ನೀಡಿರುವಂತ ದೂರಿನಲ್ಲಿ, ನಾನು 1997ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಗೆ ನೇಮಕಾತಿಗೊಂಡಿದ್ದೇನೆ. ಕರ್ತವ್ಯದ ವೇಳೆಯಲ್ಲಿ 2005ರಲ್ಲಿ ಪ್ರೀತಿಸಿ ಮಹಿಳಾ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಸುಜಾತಾಳನ್ನು ಮದುವೆಯಾಗಿದ್ದೆನೆ. ನಮಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನ ಪತ್ನಿ ಸದ್ಯ ಎಎಸ್‌ಐ ಆಗಿ ಐಎಸ್ ಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ. ಐಎಸ್ ಡಿ ಘಟಕದ ಎಸ್ಪಿ ಆಗಿರುವಂತ ಅರುಣ್ ರಂಗರಾಜನ್ ಹಾಗೂ ನನ್ನ ಪತ್ನಿ ನಡುವೆ ಅಕ್ರಮ ಸಂಬಂಧ ಇರೋದು ಗೊತ್ತಾಗಿತ್ತು. ಒಂದೂವರೆ ತಿಂಗಳ ಹಿಂದೆ ನನ್ನ ಸಂಶಯದ ಬಗ್ಗೆ ವಿಚಾರಿಸಿದೆ. ಪತ್ನಿ ಹಾಗೂ ಅರುಣ್ ರಂಗರಾಜನ್ ಐ ವಾನ್ ಶಾಹಿ ರಸ್ತೆಯಲ್ಲಿರುವ ಪಿಡಬ್ಲ್ಯೂ ಡಿ ಕ್ವಾಟ್ರಾಸ್ ನಲ್ಲಿ ಇರುವ ಖಚಿತ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ಹೋಗಿ ನೋಡಿದಾಗ, ನನ್ನ ಪತ್ನಿ ಸುಜಾತಾ, ಅರುಣ್ ರಂಗರಾಜನ್ ಜೊತೆಗೆ ಇದ್ದದ್ದು ಕಂಡು ಬಂದಿತ್ತು ಎಂದಿದ್ದಾರೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ, ಅರುಣ್ ರಂಗರಾಜನ್ ಪ್ರಶ್ನಿಸಿದಾಗ ನೀನು ಯಾರು ಕೇಳೋದಕ್ಕೆ. ನಮ್ಮ ಇಷ್ಟದಂತೆ ಇದ್ದೇವೆ ಎಂಬುದಾಗಿ ಹೇಳಿದರು. ಅಲ್ಲದೇ ನನ್ನ ಮೇಲೆ ಹಲ್ಲೆ ನಡೆಸಿದರು. ನನಗೆ ಗಾಯಗಳಾಗಿವೆ. ಅಲ್ಲಿಂದ ನಾನು ಹೇಗೋ ತಪ್ಪಿಸಿಕೊಂಡು ಬಂದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಳಿಕ ಬುದ್ಧಿಹೇಳಿ ಮಕ್ಕಳ ಸಲುವಾಗಿ ಪತ್ನಿಯ ಜೊತೆಗೆ ಇದ್ದೆನು. ಮಾರ್ಚ್ 7ರಂದು ಮಧ್ಯಾಹ್ನ ಬಿಡಬ್ಲ್ಯೂ ಕ್ವಾಟ್ರಾಸ್ ನಲ್ಲಿ ಮತ್ತೆ ಅಸಹ್ಯರೀತಿಯಲ್ಲಿ ಅರೆಬೆತ್ತಲೆಯಾಗಿ ಕಂಡು ಬಂದರು. ಅದನ್ನು ನನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದೇನೆ. ಸದ್ಯ ತನ್ನ ಪತ್ನಿ ಹಾಗೂ ಐಪಿಎಸ್ ಅರುಣ್ ರಂಗರಾಜನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

RELATED TOPICS:
English summary :IPS officer accused of illicit relationship with female ASI, husband complains!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...