ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನಾವೆಲ್ಲರು ಸ್ನೇಹಿತರು: ಸೋಮಣ್ಣ | JANATA NEWS

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ನಾವೆಲ್ಲರು ಸ್ನೇಹಿತರು. ಒಟ್ಟಿಗೆ ಕೆಲಸ ಮಾಡಿದ್ದೇವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ.
ರಾಜಕಾರಣದಲ್ಲಿ ಇವೆಲ್ಲ ಇರುತ್ತೆ. ಏನು ಹೇಳಬೇಕು, ಎಲ್ಲಿ ಹೇಳಬೇಕೋ ಹೇಳಿದ್ದೀನಿ. ಕವಲುದಾರಿಗಳು ಇರುತ್ತವೆ. ನಾನೇನು ಸನ್ಯಾಸಿ ಅಲ್ಲ. ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು. ನಾವು ಒಟ್ಟಿಗೆ ಕೆಲಸ ಮಾಡಿದ್ದೀವಿ. ಅವರ ಕೆಲಸ ಅವರು ಮಾಡ್ತಾರೆ, ನನ್ನ ಕೆಲಸ ನಾನು ಮಾಡ್ತೀನಿ. ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ ಎಂದರು.
ನಾನು ಯಾವತ್ತಾದರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ? 4 ಗೋಡೆಗಳ ಮಧ್ಯೆ ಯಾರಿಗೆ ಏನು ಹೇಳಬೇಕೋ ಹೇಳಿದ್ದೇನೆ ಎಂದರು.
ನನ್ನನ್ನು ಬೆಂಗಳೂರಿಗೆ ಮಾತ್ರ ಯಾಕೆ ಸೀಮಿತ ಮಾಡುತ್ತೀರಿ?ಪಕ್ಷ ನನಗೆ ಕೊಟ್ಟ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಲೋಕಸಭೆ ಚುನಾವಣೆ ವೇಳೆ ತುಮಕೂರಿನಲ್ಲಿ ಬಿಜೆಪಿ ಗೆಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.