5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ! | JANATA NEWS

ಬೆಂಗಳೂರು : 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ.
ಐದು ಮತ್ತು ಎಂಟನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ ಏಕಸದಸ್ಯ ಪೀಠ ಮಾ.10ರಂದು ಆದೇಶ ನೀಡಿತ್ತು. ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು.
ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇಂದು ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿದ ವಿಭಾಗೀಯ ಪೀಠ 5 ಮತ್ತು 8ನೇ ತರಗತಿ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿದೆ.
ಮಾರ್ಚ್ 27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ವಿಭಾಗೀಯ ಪೀಠ ಸೂಚನೆ ನೀಡಿದೆ. ಪಠ್ಯಕ್ರಮದಲ್ಲಿ ಉಲ್ಲೇಖಿಸಿರುವುದನ್ನು ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಪೀಠ ನಿರ್ದೇಶನ ನೀಡಿದೆ. ಜತೆಗೆ, ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶವನ್ನು ಶಾಲೆಗೆ ಮಾತ್ರವೇ ತಲುಪಿಸಬೇಕು ಎಂದೂ ಸೂಚಿಸಿದೆ.