ಕರ್ನಾಟಕದ ಹಳ್ಳಿಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ಅನುಷ್ಠಾನ: ಸಿದ್ದರಾಮಯ್ಯ ವಿರೋಧ | JANATA NEWS

ಬೆಂಗಳೂರು : ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಹಳ್ಳಿಗಳಲ್ಲಿ ಯೋಜನೆಗಳ ಜಾರಿಗೆ ₹54 ಕೋಟಿ ಬಿಡುಗಡೆ ಮಾಡಿದೆ ಎಂಬ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶಿಂಧೆ ಸರ್ಕಾರವನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಲ್ಲದೆ, ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಶಿಂಧೆ ಸರ್ಕಾರವು ವಿವಾದಿತ ಗ್ರಾಮಗಳಲ್ಲಿ ತನ್ನ ಪ್ರಮುಖ ಆರೋಗ್ಯ ಕಾರ್ಯಕ್ರಮ 'ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ' ಅನುಷ್ಠಾನವನ್ನು ಇತ್ತೀಚೆಗೆ ಘೋಷಿಸಿದೆ. ಮಹಾಜನ್ ಆಯೋಗದ ವರದಿ ಅಂತಿಮವಾಗಿದೆ ಮತ್ತು ಅಂಗೀಕರಿಸಲ್ಪಟ್ಟಿದೆ ಎಂದು ಕರ್ನಾಟಕವು ತಿಳಿಸಿದೆ. ಆದರೆ, ನೆರೆಯ ರಾಜ್ಯವು ಕರ್ನಾಟಕದ ಹಳ್ಳಿಗಳಲ್ಲಿ ಸರ್ಕಾರಿ ಕಾರ್ಯಕ್ರಮವನ್ನು ಜಾರಿಗೊಳಿಸುವುದಾಗಿ ಘೋಷಿಸಿದ ನಂತರ ತೀವ್ರ ವಿವಾದ ಉಂಟಾಗಿದೆ.
ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ ಗಡಿಯೊಳಗಿರುವ 865 ಹಳ್ಳಿಗಳಿಗೆ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಎಂಬ ಕಾರ್ಯಕ್ರಮವನ್ನು ನೀಡಲು ಹೊರಟಿರುವುದು ನಾಡಿನ ಸಾರ್ವಭೌಮತೆ ಮತ್ತು ಒಕ್ಕೂಟ ವ್ಯವಸ್ಥೆಗೆ ಹಾಕಿರುವ ಸವಾಲು' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಒಂದು ರಾಜ್ಯದ ಸರ್ಕಾರ ಇನ್ನೊಂದು ರಾಜ್ಯದ ವಿಚಾರದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಸುಮ್ಮನಿರುವುದು ಹೇಗೆ?. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದನ್ನು ವಿರೋಧಿಸುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸತ್ತಿವೆಯಾ?
ಎಂಬ ಅನುಮಾನ ಬರುತ್ತಿದೆ ಎಂದು ಕಿಡಿಕಾರಿದರು. 'ಮಹಾರಾಷ್ಟ್ರದ ಹಲವಾರು ಹಳ್ಳಿಗಳ ಜನರು ತಮ್ಮ ಸರ್ಕಾರದ ಬಗ್ಗೆ ಸಂತೋಷವಾಗಿಲ್ಲ ಮತ್ತು ಕರ್ನಾಟಕದೊಂದಿಗೆ ಸೇರಲು ಬಯಸುತ್ತಾರೆ. ಹೀಗಿರುವಾಗ, ಅವರ ಸಮಸ್ಯೆಗಳನ್ನು ಪರಿಹರಿಸಲು ನೆರೆಯ ರಾಜ್ಯವು ಮಧ್ಯಪ್ರವೇಶಿಸಬಹುದೇ?. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಹಂಚಿಕೆಗೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ ಮತ್ತು ನಮ್ಮ ರಾಜ್ಯದ ಒಂದಿಂಚು ಭೂಮಿಯನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಹಂಚಿಕೆಗೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ. ಮಹಾರಾಷ್ಟ್ರ ಸರ್ಕಾರ ಕಟ್ಟುಪಾಡು ಮೀರಿ ಕರ್ನಾಟಕದ ಜನರಿಗೆ ಯೋಜನೆ ಘೋಷಿಸಿದರೂ ಕೇಂದ್ರ ಮತ್ತು ರಾಜ್ಯ @BJP4Karnataka ಸರ್ಕಾರ ಸುಮ್ಮನಿರುವುದು ನೋಡಿದರೆ ಸರ್ಕಾರಗಳು ಸತ್ತಿವೆಯಾ? ಎಂಬ ಅನುಮಾನ ಬರುತ್ತಿದೆ. 3/4#ಕನ್ನಡನೆಲ
— Siddaramaiah (@siddaramaiah) March 15, 2023