ಎಕ್ಸ್ಪ್ರೆಸ್ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆ ಸರಿಪಡಿಸಲಾಗುತ್ತಿದೆ: ಪ್ರತಾಪ್ ಸಿಂಹ | JANATA NEWS

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ.
ಉದ್ಘಾಟನೆಗೊಂಡ ಮರುದಿನವೇ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇ ಕಿತ್ತು ಬಂದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದು, ರಸ್ತೆ ಕಿತ್ತು ಬಂದಿಲ್ಲ. ಎಕ್ಸ್ಪನ್ಶನ್ ಜಾಯಿಂಟ್ ಬಳಿ ಕಂಡು ಬಂದಿದ್ದ ಸಮಸ್ಯೆಯನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರತಾಪ್ ಸಿಂಹ ಅವರ ಈ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಟೀಕಿಸಿದೆ. ಮಾನ್ಯ ಸಂಸದರೇ, ಯಾರ ಕಿವಿಡೆ ಹೂವು ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಎಂದು ಪ್ರಶ್ನೆಸಿದೆ. ಅಂದಹಾಗೆ ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ? ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ? ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ? ಎಂದು ಪ್ರಶ್ನಿಸಿದೆ.
ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ. pic.twitter.com/MqoCSJYlDt
— Pratap Simha (@mepratap) March 15, 2023