ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್-ಕಾರು ಅಪಘಾತ | JANATA NEWS

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ.
ರಾಮನಗರ ತಾಲೂಕಿನ ಬಸವನಪುರ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಲಾರಿ ಹಾಗೂ ಕಾರು ಚಾಲಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪರಾಗಿದ್ದಾರೆ.
ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭಿವಿಸಿದ ನಂತರ ಲಾರಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಡಿಕ್ಕಿ ರಭಸಕ್ಕೆ ಲಾರಿ ಹಿಂಭಾಗ ಕಾರಿನ ಮೇಲೆ ಬಿದ್ದಿದ್ದು, ಲಾರಿಯ ಮುಂಭಾಗ ಜಖಂಗೊಂಡಿದೆ.
ಸೇತುವೆ ಕೆಳಭಾಗದಲ್ಲಿ ಎಕ್ಸ್ಪ್ರೆಸ್ ಹೈವೇ ಇರುವುದರಿಂದ ಹೆಚ್ಚಿನ ವಾಹನ ಸಂಚಾರಿಸುತ್ತಿತ್ತು. ಏನಾದರು ಟಿಪ್ಪರ್ ಸೇತುವೆಯಿಂದ ಕೆಳಗೆ ಉರುಳಿದ್ದರೆ ವಾಹನಗಳ ಮೇಲೆ ಲಾರಿ ಉರುಳಿ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟಾವಷತ್ ಭಾರಿ ಅನಾಹುತ ತಪ್ಪಿದಂತಾಗಿದೆ.
ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.