Fri,Mar31,2023
ಕನ್ನಡ / English

ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ಒಂದು ದಂತಕಥೆ: ಡಾ ಶಿವರಾಜ್‌ಕುಮಾರ್ | JANATA NEWS

17 Mar 2023
475

ಬೆಂಗಳೂರು : ಇಂದು ದಿ.ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಅವರ ಸಹೋದರ ಶಿವರಾಜ್​​ ಕುಮಾರ್​ ಸೇರಿದಂತೆ ಸ್ಯಾಂಡಲ್​ವುಡ್‌​​ ಸೆಲೆಬ್ರಿಟಿಗಳು ಹಾಗೂ ರಾಜಕೀಯ ನಾಯಕರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಪ್ಪು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸುವ ಮೂಲಕ ತಮ್ಮನೊಂದಿಗಿರುವ ಬಾಲ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ. ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್ ತಮ್ಮ ಫೇಸ್​ಬುಕ್​ನಲ್ಲಿ ಅಪ್ಪು ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. 'ನಿನ್ನ ನೆನಪುಗಳು ಎಂದಿಗೂ ಅಮರ..ಹುಟ್ಟುಹಬ್ಬದ ಶುಭಾಶಯಗಳು ಅಪ್ಪು' ಎಂದು ಬರೆಯುವ ಮೂಲಕ ಫೋಟೋ ಹಂಚಿಕೊಂಡಿದ್ದಾರೆ.

ಅಪ್ಪು
ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್ ಆಗೋದನ್ನ ಆವಾಗ್ಲೇ ಹೇಳ್ತಾ ಇತ್ತು. ನೀನು ನಕ್ಕರೆ ಎಲ್ರು ನಗ್ತಾ ಇದ್ರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ತಾ ಇದ್ರು, ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ರಾ ಇದ್ರು, ಮನೆಗೆ ಬಂದ ಅತಿಥಿ ನೆಂಟರುಗಳಿಗೆಲ್ಲ ನೀನೇ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯ ಮೇಲೆ ಬಂದು ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ.

ನಿನ್ನನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜೊತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗನಾಗಿ, ಹಬ್ಬ ಯಾವುದೇ ಆಗಿದ್ರೂ ನಿನ್ನ ಹೆಸರಿನಲ್ಲಿ ಪಟಾಕಿಗಳನ್ನು ಹಚ್ಚೋ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳ್ತಾ ಇದೀನಿ, ನೀನು ಹುಟ್ಟಿದ್ದೇ ಒಂದು ಉತ್ಸವ. ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು.

janataಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧ ಸಾಧನೆಗೈದು ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ ಅವರ ಜನ್ಮಸ್ಮರಣೆಯಂದು ಗೌರವ ಪೂರ್ವಕ ನಮನಗಳು. ಅಪ್ಪು ಸದಾ ಅಜರಾಮರ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

"ತಮ್ಮ ವ್ಯಕ್ತಿತ್ವ ಹಾಗೂ ಕಲಾಪ್ರೌಢಿಮೆಯಿಂದ ಅಸಂಖ್ಯಾತ ಅಭಿಮಾನಿಗಳನ್ನು ಪಡೆದ ಪ್ರತಿಭಾನ್ವಿತ ಕಲಾವಿದ, ಕನ್ನಡಿಗರ ಕಣ್ಮಣಿ, ವರನಟ ಡಾ.ರಾಜ್ ಕುಮಾರ್ ಪುತ್ರ, ಅಕಾಲಿಕವಾಗಿ ನಮ್ಮನ್ನಗಲಿದ ಕರ್ನಾಟಕ ರತ್ನ ಡಾ.ಪುನೀತ್ ರಾಜ್​ಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ನಮನಗಳು" ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿನ ಪುನೀತ್ ರಾಜ್‌ಕುಮಾರ್ ಸಮಾಧಿ ಬಳಿ ಸಹಸ್ರಾರು ಅಭಿಮಾನಿಗಳು ಬಂದು ಅಪ್ಪು ದರ್ಶನವನ್ನು ಪಡೆಯುತ್ತಿದ್ದಾರೆ. ಅಪ್ಪು ಸಮಾಧಿ ಬಳಿ ಅಕ್ಷರಶಃ ಜನಜಾತ್ರೆಯಾಗಿದೆ, ಅಲ್ಲಿಗೆ ಬರುವ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಇಂದು 1 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

RELATED TOPICS:
English summary :Puneeth Born is a festival, grew up is history, life is a legend: Dr Shivarajkumar

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...