ಹೆಂಡತಿಯನ್ನು ಗೋಡೆಗೆ ಗುದ್ದಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಾಫ್ಟ್‌ವೇರ್ ಗಂಡ | JANATA NEWS

ಬೆಂಗಳೂರು : ಪತ್ನಿಯನ್ನು ಸಾಯಿಸಲು ಯತ್ನಿಸಿದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿಬೇಡ ಅಂದಿದ್ದಕ್ಕೆ ಹೆಂಡತಿಯನ್ನು ಗೋಡೆಗೆ ಹೊಡೆದು ತಾನೂ ಕುತ್ತಿಗೆಗೆ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆರ್. ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಡಿಬೇಡ ಅಂದಿದ್ದಕ್ಕೆ ಹೆಂಡತಿ ಸುಧಾರಾಣಿಯ ಗೋಡೆಗೆ ಹೊಡೆದು ಪತಿ ಹರ್ಷ ತಾನೂ ಕುತ್ತಿಗೆಗೆ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ತುಮಕೂರು ಮೂಲದ ಹರ್ಷ ಮತ್ತು ಆತನ ಪತ್ನಿ ಸುಧಾರಾಣಿ ಇಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಆರ್.ಆರ್.ನಗರದಲ್ಲಿ ದಂಪತಿ ವಾಸವಿದ್ದರು. 12 ವರ್ಷದ ಮಗನಿದ್ದಾನೆ.
ಇತ್ತೀಚೆಗೆ ತುಮಕೂರಿನಲ್ಲಿ ಜಮೀನು ಮಾರಿದ್ದ ಹರ್ಷನಿಗೆ ಸಾಕಷ್ಟು ಹಣ ಬಂದಿತ್ತು. ಹಣ ಬಂದಿದ್ದೇ ಹರ್ಷ ಸಂಪೂರ್ಣವಾಗಿ ಬದಲಾಗಿದ್ದ. ಲಕ್ಷ, ಲಕ್ಷ ಸಂಬಳ ಬರೋ ಕೆಲಸವನ್ನೂ ಬಿಟ್ಟು ಕುಡಿತದ ದಾಸನಾಗಿದ್ದ.
ಮನೆಯಲ್ಲಿ ಕುಡಿದು ಹೆಂಡತಿ ಜೊತೆ ಜಗಳ ಟೆಕ್ಕಿ ಹರ್ಷ ಕಳೆದ ಐದಾರು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿ ಕುಡ್ಕೊಂಡು ಇರ್ತಿದ್ದನಂತೆ. ಹೆಂಡತಿ ಜತೆ ಜಗಳ ಮಾಡಿ ಸೈಕೋ ರೀತಿ ವರ್ತಿಸುತ್ತಿದ್ದನಂತೆ. ಇದರಿಂದ ಬೇಸತ್ತ ಪತ್ನಿ ಸುಧಾರಾಣಿ, 'ಕುಡಿತ ಬಿಟ್ಟು ಕೆಲಸಕ್ಕೆ ಹೋಗಿ' ಎಂದು ಬುದ್ಧಿವಾದ ಹೇಳಿದ್ದಾಳೆ.
ಮಾ. 17ರಂದು ಮತ್ತೆ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಹರ್ಷ ತನ್ನ ಹೆಂಡತಿಯನ್ನು ಗೋಡೆಗೆ ಗುದ್ದಿ ಕೊಲೆಗೆ ಯತ್ನಿಸಿದ್ದಾನೆ. ಬಳಿಕ ತಾನೂ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರ್.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.