ಕೆಎಸ್‌ಆರ್‌ಟಿಸಿ ಬಸ್ - ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸಾವು | JANATA NEWS

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಒನ್ ವೇಯಲ್ಲಿ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಣಮಿಣಕಿ ಟೋಲ್ ಬಳಿ ನಡೆದಿದೆ.
ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದು ಆತನನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Horrible accident between KSRTC bus and bike, biker dies