ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ! | JANATA NEWS

ಬೆಳಗಾವಿ : ಪತ್ನಿಯನ್ನು ಕೊಚ್ಚಿ ಕೊಂದ ಪತಿಯೊಬ್ಬ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಜಾನವ್ವ ದ್ಯಾಮನ್ನವರ (50) ಮೃತ ಮಹಿಳೆ, ಜಾನವ್ವರನ್ನ ಪತಿ ಬಸವಗೌಡ ಶಾಸಪ್ಪನವರ (55) ಕೊಲೆ ಮಾಡಿದ್ದಾನೆ.
ಪತ್ನಿ ಕೊಲೆಗೈದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
English summary :The husband killed his wife with a handgun and surrendered to suicide!