ಮಾ.24ಕ್ಕೆ ಸಚಿವ ಸಂಪುಟ ಸಭೆ, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ! | JANATA NEWS

ಬಾಗಲಕೋಟೆ : ಮಾರ್ಚ್ 24 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಮಾತನಾಡಿದ ಅವರು, ಮೀಸಲಾತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದರು. ಅಲ್ಲದೇ ರಾಜ್ಯದಲ್ಲಿನ 2 ಎ ಮೀಸಲಾತಿ ಹೊಂದಿರುವ ಸಮುದಾಯಗಳನ್ನು 3ಬಿ ಗೆ ಹಾಕುವ ಬಗ್ಗೆ ಯಾವುದೇ ವರದಿಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ.ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ.ಮುದ್ದೇಬಿಹಾಳ ಕ್ಷೇತ್ರದಲ್ಲಿ1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಕೆಲಸಗಳು ಮಾತನಾಡಬೇಕು ಎಂದರು.
ಹುನಗುಂದ ಪ್ರಮುಖ ಕ್ಷೇತ್ರ. ಇಳಕಲ್ ಸೀರೆ ಮಾತ್ರವಲ್ಲದೆ ಇಲ್ಲಿನ ಗ್ರಾನೈಟ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೋಗಿದೆ. ಕಳೆದ ಮೂರು ವರ್ಷಗಳಲ್ಲಿ ಔದ್ಯೋಗಿಕ ವಾಗಿ, ಕೃಷಿಗೆ ಪ್ರಸಿದ್ಧವಾಗಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ ದಾಖಲೆ ಪ್ರಮಾಣದಲ್ಲಿ ಆಗಲು ಕಾರಣ ನಮ್ಮ ಸರ್ಕಾರ ಎಂದರು.
ಹುನಗುಂದ ದಲ್ಲಿ 36,598 ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ತಲುಪಿದೆ . ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಅಡಿ 2 ನೇ ಕಂತಿನಲ್ಲಿ 47 ಲಕ್ಷ ರೈತರಿಗೆ 975 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ಡಿಬಿಟಿ ಮೂಲಕ ತಲುಪಿಸಲಾಗಿದೆ ಎಂದರು.
ಮುಧೋಳದಲ್ಲಿ 800 ಕೆಲಸಗಳು ಜನರನ್ನು ಮುಟ್ಟಿವೆ. ಜನ ಇದನ್ನು ಸ್ಮರಿಸುತ್ತಾರೆ. ಅಭಿವೃದ್ಧಿಯಲ್ಲಿ ಬೇಧ ಮಾಡಿಲ್ಲ. ಎಲ್ಲಾ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಬಿ.ಎಸ್.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತಂದರು. ಇದರಿಂದ ಅಲ್ಪಸಂಖ್ಯಾತ ರಿಗೆ ಹೆಚ್ಚಿನ ಲಾಭವಾಗಿದೆ ಎಂದರು.