BLR Metro
Sat,Jun03,2023
ಕನ್ನಡ / English

ಕೈ ನೋಡಿ ಭವಿಷ್ಯ ಹೇಳ್ತೀನಿ ಎಂದು ವ್ಯಂಗ್ಯ, ಸ್ನೇಹಿತನನ್ನೇ ಹತ್ಯೆಗೈದ ಗೆಳೆಯ! | JANATA NEWS

26 Mar 2023
566

ಬೆಂಗಳೂರು : ಕೈ ನೋಡಿ ಭವಿಷ್ಯ ಹೇಳುತ್ತ ಅಪಹಾಸ್ಯ ಮಾಡುತ್ತಿದ್ದ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಗೋವಿಂದರಾಜನಗರದಲ್ಲಿ ನಡೆದಿದೆ.

ನರೇಶ್ ಸಾವನ್ನಪ್ಪಿದ ವ್ಯಕ್ತಿ ಹಾಗೂ ಮಾರಿಮುತ್ತು ಬಂಧಿತ ವ್ಯಕ್ತಿ. ಮಾರಿಮುತ್ತು ಹೆಚ್ಚು ಯಾರೊಂದಿಗೂ ಬೆರೆಯದೇ ವಿಚಿತ್ರ ಮನಸ್ಥಿತಿಯವನಾಗಿದ್ದ. ಹನ್ನೊಂದು ವರ್ಷದವನಿದ್ದಾಗಲೇ ವಿಜಯನಗರ ವ್ಯಾಪ್ತಿಯಲ್ಲಿ ಹತ್ಯೆ ಮಾಡಿ ಸೆರೆವಾಸ ಅನುಭವಿಸಿ ಹೊರಬಂದಿದ್ದ.

ಮೃತ ನರೇಶ್, ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆಗೆ ಗೋವಿಂದರಾಜನಗರದಲ್ಲಿ ವಾಸವಿದ್ದ. ಗಾರೆ ಕೆಲಸ ಮಾಡಿಕೊಂಡಿದ್ದ. ಶನಿವಾರ ಮಧ್ಯಾಹ್ನ ಮಾರಿಮುತ್ತು ಜೊತೆ ನಾಗರಭಾವಿ ಮುಖ್ಯರಸ್ತೆಯಲ್ಲಿರುವ ಬಾರ್‌ನಲ್ಲಿ ಕುಡಿಯಲು ಬಂದಿದ್ದ ನರೇಶ್ ನಿನ್ನ ಭವಿಷ್ಯ ಹೇಳ್ತೀನಿ ಎಂದು ಆತನ ಬಳಿ ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ ಎಂದು ಆತನನ್ನ ವ್ಯಂಗ್ಯವಾಡಿದ್ದಾನೆ.

ಸಿಟ್ಟಿಗೆದ್ದ ಮಾರಿಮುತ್ತು ಮತ್ತು ನರೇಶ್ ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು. ಜಗಳವಾಡುತ್ತಲೇ ಇಬ್ಬರೂ ಹೊರಬಂದಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಟೈಲ್ಸ್ ಕಲ್ಲಿನಿಂದ ನರೇಶ್ ತಲೆಗೆ ಹೊಡೆದಿದ್ದ ಮಾರಿಮುತ್ತು ಪರಾರಿಯಾಗಿದ್ದ. ಕುಸಿದುಬಿದ್ದು ನರೇಶ್ ಸಾವನ್ನಪ್ಪಿದ್ದ.

ಮೃತನ ಪತ್ನಿ ಮಹಾದೇವಿ ನೀಡಿದ ದೂರಿನ ಮೇರೆಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ‌.

logo
RELATED TOPICS:
English summary :Irony that you can tell fortune by looking at your hand, the friend who killed his friend!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...