Thu,May09,2024
ಕನ್ನಡ / English

ಸಿಎಂ ನಾನೇ ಎನ್ನುವ ಸಿದ್ದರಾಮಯ್ಯಗೆ ಒಂದು ಕ್ಷೇತ್ರ ಹುಡುಕಿ ಕೊಳ್ಳಲಾಗಲಿಲ್ಲ: ಪ್ರತಾಪ್ ಸಿಂಹ | JANATA NEWS

26 Mar 2023
1212

ಮೈಸೂರು : ಕಾಂಗ್ರೆಸ್ ಪ್ರಶ್ನಾತೀತ ನಾಯಕ ನಾನೇ, ಮುಂದಿನ ಸಿಎಂ ನಾನೇ ಎನ್ನುವ ಸಿದ್ದರಾಮಯ್ಯಗೆ ಒಂದು ಕ್ಷೇತ್ರ ಹುಡುಕಿ ಕೊಳ್ಳಲಾಗಲಿಲ್ಲ. ಊರಿಗೊಬ್ಳೇ ನಾನೇ ಪದ್ಮಾವತಿ ಅಂತಾ ಸಿದ್ದರಾಮಯ್ಯ ಓಡಾಡುತ್ತಿದ್ದರು. ಈಗ ಕೊನೆಗೆ ಹಳೆ ಗಂಡನ ಪಾದವೇ ಗತಿ ಅಂತಾ ವರುಣಾಗೆ ಬಂದಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಗನ ನೆಲೆ ಕಳೆದು ವರುಣಾಗೆ ಬರುವ ಸ್ಥಿತಿ ಸಿದ್ದರಾಮಯ್ಯ ಅವರಿಗೆ ಬಂತು. ಸಿದ್ದರಾಮಯ್ಯ ಪುಕ್ಕಲತನದಿಂದ ವರುಣಾ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಕಳೆದ ಬಾರಿ ಸಣ್ಣ ಅಂತರದಿಂದ ಸಿದ್ದರಾಮಯ್ಯ ಎಸ್ಕೇಪ್ (ಬಾದಾಮಿಯಲ್ಲಿ ಅಲ್ಪ ಮತಗಳಿಂದ ಗೆಲುವು) ಆಗಿಬಿಟ್ಟಿದ್ದರು. ಈ ಬಾರಿ ಅವರು ಎಲ್ಲೇ ನಿಂತರು ಸೋಲುತ್ತಾರೆ ಎಂದು ಹೇಳಿದರು.

ಹೈಕಮಾಂಡ್ ಟಿಕೆಟ್ ಕೊಟ್ಟರೆ ನಾನು ಕೋಲಾರದಲ್ಲಿ ಸ್ಪರ್ಧಿಸುತ್ತೇನೆಂದು ಸಿದ್ದರಾಮಯ್ಯ ಹೇಳುತ್ತಾರೆ. ಕ್ಷೇತ್ರ ಕೊಡಲು ಹೈಕಮಾಂಡ್ ರೆಡಿ ಇಲ್ಲವೆಂದ ಮೇಲೆ ಯಾವ ಧೈರ್ಯದ ಮೇಲೆ ಮುಂದಿನ ಸಿಎಂ ನಾನೇ ಎನ್ನುತ್ತಾರೆ? ಟಿಕೆಟ್ ಕೊಡದೆ ಇದ್ದ ಪಕ್ಷ ಅವರಿಗೆ ಸಿಎಂ ಸ್ಥಾನ ಕೊಡುತ್ತಾ? 2018 ರಲ್ಲೇ ಸಿದ್ದರಾಮಯ್ಯ ರಾಜಕೀಯ ಮುಗಿದು ಹೋಗಿದೆ ಎಂದರು.

ಕ್ಷೇತ್ರ ಹುಡುಕಾಟದ ನಡುವೆ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎಂಬಂತಾಗಿತ್ತು. ಎರಡು ಮೂರು ಸುತ್ತಿನ ಸರ್ವೆ ಕೂಡ ಸಿದ್ದರಾಮಯ್ಯ ಅವರ ಬೆಂಬಲಿಗರು ನಡೆಸಿದ್ದರು. ಆದರೆ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಹೇಳಿಕೊಂಡೇ ಬಂದಿತ್ತು ಎಂದರು.

ವಿಧಾನಸಭೆಗೆ ಪ್ರತಾಪ್ ಸಿಂಹ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, 2029 ರವರೆಗೂ ಮೋದಿ ಅವರ ಆಡಳಿತದಲ್ಲಿ ಸಂಸದನಾಗಿ ಕೆಲಸ ಮಾಡುತ್ತೇನೆ. 8 ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಸಂಸದನ ಸ್ಥಾನ ಬಿಟ್ಟು ಒಂದು ವಿಧಾನಸಭಾ ಕ್ಷೇತ್ರ ಹುಡುಕಿಕೊಳ್ಳುವಷ್ಟು ದಡ್ಡ ನಾನಲ್ಲ ಎಂದರು.

RELATED TOPICS:
English summary :Siddaramaiah, aka CM, could not find a constituency: Pratap Simha

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...