ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ | JANATA NEWS

ಬೆಂಗಳೂರು : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಅವರ ಬಂಧನವಾಗುವ ಸಾಧ್ಯತೆಯಿದೆ.
ಇಂದು ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ-ವಿವಾದಗಳನ್ನು ಆಲಿಸಿದ ಏಕಸದಸ್ಯ ಪೀಠ ಅಂತಿಮವಾಗಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.
ಇಂದು ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಅದೇಶ ಹೊರಡಿಸಿದೆ.
ಮಧ್ಯಂತರ ನಿರೀಕ್ಷಣಾ ಜಾಮೀನು ಆದೇಶದ ಹಿನ್ನೆಲೆ ಮತ್ತೆ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದೆ.