ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಕಾಲ್ ಮಾಡಿ ಕಾಂಗ್ರೆಸ್ಗೆ ಆಹ್ವಾನ ನೀಡುತ್ತಿದ್ದಾರೆ | JANATA NEWS

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಮ್ಮ ಪಕ್ಷಕ್ಕೆ ಬನ್ನಿ ನಿಮಗೆ ಟಿಕೆಟ್ ಕೊಡುತ್ತೇವೆ ಎಂದು ನಮ್ಮ ಬಿಜೆಪಿ ಪಕ್ಷದ ಶಾಸಕರಿಗೆ ಕರೆ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೊಸ ಬಾಂಬ್ ಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಅಭ್ಯರ್ಥಿಗಳಿಲ್ಲದ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನಮ್ಮ ಶಾಸಕರಿಗೆ ಫೋನ್ ಕಾಲ್ ಮಾಡಿ ತಮ್ಮ ಪಕ್ಷಕ್ಕೆ ಆಹ್ವಾನಿಸುತ್ತಿದ್ದಾರೆ. ಟಿಕೆಟ್ ನೀಡುತ್ತೇವೆ ಅಂತಾ 2-3 ದಿನಗಳಿಂದ ಕರೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ, ಅವರಿಗೆ ಸರಿಯಾದ ಕ್ಯಾಂಡಿಡೇಟ್ ಇಲ್ಲದಿರುವುದರಿಂದ ಹತಾಶರಾಗಿದ್ದಾರೆ, ಕಾಂಗ್ರೆಸ್ ಪಕ್ಷದ ವಸ್ತು ಸ್ಥಿತಿ ದಿವಾಳಿಯಾಗಿದೆ ಎಂದರು.
ಚುನಾವಣೆಗಾಗಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂಬ ಆರೋಪ ಕುರಿತಾಗಿ ಮಾತನಾಡಿದ ಸಿಎಂ, ಕಾಂಗ್ರೆಸ್ ಗೆ ಹೊಟ್ಟೆ ಕಿಚ್ಚು, ಅವರು ಮಾಡದಿರೋದು ನಾವು ಮಾಡಿದ್ದೇವೆ ಎಂದರು. ಕಾಂಗ್ರೆಸ್ ನಿಂದ ವಲಸೆ ಹೋದವರು ಮತ್ತೆ ಕಾಂಗ್ರೆಸ್ ಬರುತ್ತಾರೆ ಅನ್ನೋ ಚಲುವನಾರಾಯಣ ಸ್ವಾಮಿ ಹೇಳಿಕೆ ವಿಚಾರಕ್ಕೆ, ಚಲುವನಾರಾಯಣ ಸ್ವಾಮಿಯೇ ವಲಸೆ ವ್ಯಕ್ತಿ, ಆತನ ಮಾತು ನಂಬೋಕೆ ಆಗುತ್ತಾ? ಎಂದು ಹೇಳಿದರು.
ಚುನಾವಣೆಗೆ ಇಳಿಯುವ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಬಹುದು ಎಂದಿದ್ದಾರೆ. ಅಲ್ಲದೆ, ಈ ಬಾರಿ ಬಿಜೆಪಿಗೆ ಪ್ರಬಲ ಪೈಪೋಟಿ ಇದೆ ಎಂಬ ಪ್ರಶ್ನೆಗೆ ಉತ್ತಿರಿಸಿದ ಅವರು, ಗೆಲ್ಲವಂತಹ ಪಕ್ಷಕ್ಕೆ ಎಲ್ಲಾ ಕಡೆ ಫೈಟ್ ಇದ್ದೇ ಇರುತ್ತೆ ಎಂದರು.