ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ, ಮುಖ್ಯೋಪಾಧ್ಯಾಯ ಅಮಾನತು | JANATA NEWS

ತುಮಕೂರು : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ.
ಕಾಮುಕ ಶಿಕ್ಷಕ ಮಂಜುನಾಥ ಎಂಬಾತನ್ನನ್ನು ಕರ್ತವ್ಯ ಲೋಪದ ಆಧಾರದ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರು ಮಧುಗಿರಿ ಬಿಇಒ ತಿಮ್ಮರಾಜು ರಿಂದ ಅಮಾನತು ಆದೇಶ ಹೊರಡಿಸಿದ್ದಾರೆ.
ಮೂಲಗಳ ಪ್ರಕಾರ, ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ, ವಿದ್ಯಾರ್ಥಿನಿಯರೊಂದಿಗೆ ಪ್ರತಿದಿನ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದೇ ವೇಳೆ ಕರ್ತವ್ಯಲೋಪ ಆರೋಪದಡಿ ಮುಖ್ಯಶಿಕ್ಷಕ ನಟರಾಜ್ ಅವರನ್ನು ಅಮಾನತುಗೊಳಿಸಲಾಗಿದೆ. ಅಪರಾಧದ ಬಗ್ಗೆ ಮಾಹಿತಿ ಪಡೆದ ಸಂತ್ರಸ್ತರ ಪೋಷಕರು, ಇತರ ಸ್ಥಳೀಯ ನಿವಾಸಿಗಳೊಂದಿಗೆ ಶಾಲೆಯ ಆವರಣಕ್ಕೆ ನುಗ್ಗಿ ಆರೋಪಿ ಶಿಕ್ಷಕನ ಕೃತ್ಯದ ಬಗ್ಗೆ ಪ್ರಶ್ನಿಸಿದರು. ಅಲ್ಲದೆ, ಗುಂಪು ಮಂಜುನಾಥನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿತ್ತು.