Sun,Oct26,2025
ಕನ್ನಡ / English

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ! | JANATA NEWS

29 Mar 2023

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆಯಾಗಿರುವ ಡಿ. ತ್ರಿವೇಣಿ ಆಯ್ಕೆ ಆಗಿದ್ದು, ರಾಜ್ಯದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ 23ನೇ ವಯಸ್ಸಿಗೆ ಬಳ್ಳಾರಿಯ 4ನೇ ವಾರ್ಡ್​ನ ಸದಸ್ಯೆ ಆಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಅತಿ ಕಿರಿಯ ವಯಸ್ಸಿನ ಪಾಲಿಕೆ ಸದಸ್ಯರು, ಮೇಯರ್ ಪಟ್ಟವನ್ನು ಅಲಂಕರಿಸಿದ್ದಾರೆ. ಇಡೀ ರಾಜ್ಯದಲ್ಲೇ ಕಿರಿಯ ವಯಸ್ಸಿನಲ್ಲಿ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಖ್ಯಾತಿಗೆ ತ್ರಿವೇಣಿ ಭಾಜನರಾಗಿದ್ದಾರೆ.

ಬಳ್ಳಾರಿಯ 4ನೇ ವಾರ್ಡ್‌ನ ಸದಸ್ಯೆ ತ್ರಿವೇಣಿ ಮೇಯರ್ ಆಗಿ ಆಯ್ಕೆ ಆಗಿದ್ದಾರೆ. ತ್ರಿವೇಣಿಯು ಕಾಂಗ್ರೆಸ್ ಮುಖಂಡ ಡಿ.ಸೂರಿ ಅವರ ಪುತ್ರಿಯಾಗಿದ್ದಾರೆ. ಇನ್ನು ಉಪಮೇಯರ್ ಆಗಿ 33ನೇ ವಾರ್ಡ್‌ನ ಜಾನಕಮ್ಮ ಆಯ್ಕೆ ಆಗಿದ್ದಾರೆ.

ಪ್ಯಾರಾ ಮೆಡಿಕಲ್​ ವಿದ್ಯಾಭ್ಯಾಸ ಮಾಡಿರುವ ಡಿ. ತ್ರಿವೇಣಿ, 2022ರಲ್ಲಿ ನಡೆದಿದ್ದ ಪಾಲಿಕೆ ಚುನಾವಣೆಯಲ್ಲಿ 4ನೇ ವಾರ್ಡ್​​ನಿಂದ ಸ್ಪರ್ಧಿಸುವ ಮೂಲಕ 501 ಮತಗಳಿಂದ ಗೆದಿದ್ದರು.

ಉಪ ಮೇಯರ್ ಸ್ಥಾನಕ್ಕೆ 3 ಜನ ಪಾಲಿಕೆ ಸದಸ್ಯರ ಮಧ್ಯೆ ಪೈಪೋಟಿ ನಡೆದಿತ್ತು. ಉಪ ಮೇಯರ್ ಸ್ಥಾನಕ್ಕೆ ಶಶಿಕಲಾ ಜಗನ್ನಾಥ, ಜಾನಕಿ,‌ ರತ್ನಮ್ಮ ಪ್ರಬಲ ಆಕಾಂಕ್ಷಿಗಳಾಗಿದ್ದರು. ಮೇಯರ್ ಎಲೆಕ್ಷನ್‌ಗೆ ಬಿಜೆಪಿಯಿಂದಲೂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಮೇಯರ್ ಸ್ಥಾನಕ್ಕೆ ಎಸ್​ಸಿ, ಉಪ ಮೇಯರ್ ಸ್ಥಾನಕ್ಕೆ ಎಸ್​ಟಿ ಮೀಸಲು ಘೋಷಣೆ ಮಾಡಲಾಗಿದೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತ ಬಂದಿದ್ದು, ಇದರ ಜೊತೆಗೆ ಐವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ 26 ಸದಸ್ಯರ ಬಲ ಹೊಂದಿರುವ ಕಾಂಗ್ರೆಸ್‌ಗೆ ಮೇಯರ್ ಗದ್ದುಗೆ ಎರೆದಿದೆ.

RELATED TOPICS:
English summary :D. as the new mayor of Bellary Municipal Corporation. Triveni option

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...