ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ! | JANATA NEWS

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಧ್ಯೆ, ಮೈಸೂರಿನ ವರುಣಾ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಕಾರ್ಯಕ್ರವೊಂದರಲ್ಲಿ ಭಾಗವಹಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವರುಣ ಕ್ಷೇತ್ರದ ಬಿಳುಗುಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿದ್ದಾರೆ. ಬಳಿಕ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ಸಮಾರಂಭವು ನೇರವೇರಿದೆ.
ಈ ಬೃಹತ್ ಸಮಾವೇಶದಲ್ಲಿ ಅತ್ಯಂತ ಉತ್ಸಾಹದಿಂದ ಬೃಹತ್ ಸಮಾವೇಶದಲ್ಲಿ ಭಾಗಿಯಾದ್ದರು ಸಿದ್ದರಾಮಯ್ಯ. ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ ಒಂದು ಸಾವಿರ ರೂಪಾಯಿ ಹಣ ಕೊಟ್ಟಿದ್ದಾರೆ. ಈ ಮೂಲಕವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.