ಬೆಂಗಳೂರಲ್ಲಿ ಐಪಿಎಲ್ ಪಂದ್ಯ ನಡೆಯುವ ದಿನ ರಾತ್ರಿ 1 ಗಂಟೆವರೆಗೂ ಮೆಟ್ರೋ ಸಂಚಾರ! | JANATA NEWS

ಬೆಂಗಳೂರು : ಐಪಿಎಲ್ ಪಂದ್ಯಗಳು ನಡೆಯುವ ದಿನಗಳಲ್ಲಿ ನಮ್ಮ ಮೆಟ್ರೋ ರೈಲುಗಳು ತಡರಾತ್ರಿಯವರೆಗೆ ಸಂಚಾರ ಮಾಡಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಐಪಿಎಲ್ ಪಂದ್ಯಗಳು ನಡೆಯಲಿದ್ದು, ಈಗಾಗಲೇ ಆರ್ಸಿಬಿ ಅಭಿಮಾನಿಗಳು ಟಿಕೆಟ್ ಖರೀದಿಗೆ ಮುಗಿಬಿದ್ದಿದ್ದಾರೆ.
ಕ್ರೀಡಾಭಿಮಾನಿಗಳಿಗೆ ಅನುಕೂಲವಾಗಲೆಂದೇ ಈ ಬಾರಿ ಮೆಟ್ರೋ ಕೂಡ ತನ್ನ ಸೇವೆಯನ್ನು ವಿಸ್ತರಿಸಲಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 2, 10, 17, 26 ಮತ್ತು ಮೇ 21ರಂದು ಐಪಿಎಲ್ ಪಂದ್ಯಗಳು ನಡೆಯಲಿವೆ. ರಾತ್ರಿ ವೇಳೆ ಪಂದ್ಯಗಳು ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಭಿಮಾನಿಗಳಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯವರೆಗೂ ಮೆಟ್ರೋ ಸೇವೆ ವಿಸ್ತರಣೆ ಮಾಡಲಿದೆ.
ಬೈಯಪ್ಪನಹಳ್ಳಿ- ಕೆಂಗೇರಿ ಮತ್ತು ನಾಗಸಂದ್ರ- ರೇಷ್ಮೆ ಸಂಸ್ಥೆಗಳ ರೈಲು ಸೇವೆಗಳನ್ನು ರಾತ್ರಿ 1 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಿಸಲಾಗುವುದು. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು 1.30ಕ್ಕೆ ಹೊರಡಲಿದೆ ಎಂದು ತಿಳಿಸಿದೆ.