ಮಾಡಾಳ್ ವಿರೂಪಾಕ್ಷಪ್ಪಗೆ ನ್ಯಾಯಾಂಗ ಬಂಧನ | JANATA NEWS

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ವಿರೂಪಾಕ್ಷಪ್ಪ ಅವರನ್ನು ಮಾರ್ಚ್ 28ರಂದು ನ್ಯಾಯಾಲಯವು ಲೋಕಾಯಯಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಲೋಕಾಯುಕ್ತ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಇದೇ ವೇಳೆ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಆದೇಶ ನೀಡಿದೆ. ವಿರೂಪಾಕ್ಷಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಸಿದ್ಧತೆ ನಡೆದಿದೆ.
English summary :Judicial custody for Madal Virupakshappa