ಆರಗ ಜ್ಞಾನೇಂದ್ರ ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ! | JANATA NEWS

ಬೆಂಗಳೂರು : ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ಖಂಡಿಸಿರುವ ಮಾಜಿ ಸಿಎಂ ಸಿದ್ದ್ರಾಮಯ್ಯ ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಅತ್ಯಾಚಾರಗಳ ಕುರಿತು ಆತಂಕ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರವನ್ನು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.
ಜೊತೆಗೆ ಅಸಮರ್ಥ ಗ್ರಹ ಸಚಿವರಿಂದಾಗಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಡುತ್ತಿದೆ ಎಂಬ ಆರೋಪ ಸಹ ಮಾಡಿದ್ದಾರೆ. ತಾವು ಮಾಡಿರುವ ಸರಣಿ ಟ್ವೀಟ್ನಲ್ಲಿ ಸಿದ್ದರಾಮಯ್ಯ, ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ಎಂದಿದ್ದಾರೆ.