ಸಿದ್ದರಾಮಯ್ಯ ಅವರು ಗೋ ಹತ್ಯೆ ಮಾಡುವವರ ಪರ ಇದ್ದಾರೆ! | JANATA NEWS

ಮೈಸೂರು : ಸಿದ್ದರಾಮಯ್ಯ ಅವರು ಗೋ ಹತ್ಯೆ ಮಾಡುವವರ ಪರ ಇದ್ದಾರೆ ಎಂಬುದು ಎಲ್ಲರಿಗೆ ಗೊತ್ತಿದೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.
ಸಿದ್ದರಾಮಯ್ಯ ಗೋಹತ್ಯೆಗಾರರ ಪರ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಲು ಕೊಡುವ ಗೋವನ್ನು ಹತ್ಯೆ ಮಾಡುವವರ ಪರ ಸಿದ್ದರಾಮಯ್ಯ ಸದಾ ಇರುತ್ತಾರೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಗೋಮಾಂಸ ತಿನ್ನುವವರ ಸಂಖ್ಯೆ ಹೆಚ್ಚಾಗಲಿದೆ. ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಬ್ರಾಂಡ್‌ಗೆ ಹಾಲು ಪೂರೈಕೆಯನ್ನು ಹೆಚ್ಚಿಸಲು ಹೈನುಗಾರರಿಗೆ ಪ್ರೋತ್ಸಾಹ ನೀಡಿದವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಂದು ಅವರು ಹೇಳಿದರು.
ನಮ್ಮ ಸರಕಾರ ವಿಲೀನವಿಲ್ಲವೆಂದು ಘಂಟಾಘೋಷವಾಗಿ ಹೇಳಿದೆ. ಆದರೂ ಸುಳ್ಳು, ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್ ಸುಳ್ಳು ಆರೋಪವನ್ನೇ ಪುನರಾವರ್ತನೆ ಮಾಡುತ್ತಿವೆ.
ಗುಜರಾತ್‌ನ ಅಮುಲ್‌ನೊಂದಿಗೆ ಕೆಎಂಎಫ್ ವಿಲೀನವಾಗಲಿದೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಿದ ಸಿಂಹ, "ನಮ್ಮ ಬಿಜೆಪಿ ಸರ್ಕಾರವು ಕೆಎಂಎಫ್ ವಿಲೀನದ ಯಾವುದೇ ಪ್ರಸ್ತಾಪವಿಲ್ಲ ಎಂದು ಪ್ರತಿಪಾದಿಸಿದೆ. ಆದರೂ ವಿರೋಧ ಪಕ್ಷಗಳು ಸುಳ್ಳು ಪ್ರಚಾರ ಮಾಡುತ್ತಿವೆ.
ಮೊದಲು ಹಿಂದಿ ಹೇರಿಕೆ ಅಂದರು ಈಗ ಅಮುಲ್ ಹೇರಿಕೆಯೆಂದು ಸುಳ್ಳು ಹರಡಿಸುತ್ತಿದ್ದಾರೆ. ಹೆರಿಟೇಜ್, ಡೂಡ್ಲ, ಆರೋಕ್ಯ ಎಂಬ ಹಾಲಿನ ಬ್ರಾಂಡ್ ಗಳು ನಂದಿನಿಯ ಅಕ್ಕತಂಗಿಯರಾ? ಅಥವಾ ತಮಿಳು ನಾಡು ಮತ್ತು ಆಂಧ್ರದಿಂದ ಬಂದ ಸೊಸೆ, ಅಳಿಯಂದಿರಾ? ಇಷ್ಟು ವರ್ಷದಿಂದ ಈ ಬ್ರಾಂಡ್ ಗಳು ಕರ್ನಾಟಕದಲ್ಲಿ ಮಾರಾಟವಾಗುತ್ತಿಲ್ವಾ? ಬಿಜೆಪಿ ಬಂದ ಮೇಲೆ ಇವು ರಾಜ್ಯಕ್ಕೆ ಬಂದವಾ ಎಂದು ಖಾರವಾಗಿ ಪ್ರಶ್ನಿಸಿದರು.