Sat,May18,2024
ಕನ್ನಡ / English

ಸ್ವ ಇಚ್ಛೆಯಿಂದಲೇ ನಿವೃತ್ತಿ ಘೋಷಿಸಿದ್ದೇನೆ: ಈಶ್ವರಪ್ಪ | JANATA NEWS

11 Apr 2023
1295

ಶಿವಮೊಗ್ಗ : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದೆಂದು ಮನವಿ ಮಾಡಿಕೊಂಡಿದ್ದಾರೆ.

ಪಕ್ಷದ ಏಳಿಗೆಗಾಗಿ ಅಲ್ಲದೆ ಹೊಸ ಅಭ್ಯರ್ಥಿಗಳಿಗೆ ಅವಕಾಶ ಸಿಗಬೇಕೆನ್ನುವ ಸದಭಿರುಚಿಯಿಂದ ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದೇನೆ ಎಂದು ಮಾಜಿ ಸಚಿವ, ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಈಶ್ವರಪ್ಪ ಅವರು ಮಾತನಾಡಿ, ರಾಜ್ಯ ಚುನಾವಣಾ ಸಮಿತಿಯ ಸಂದರ್ಭದಲ್ಲಿ ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕರಲ್ಲಿ ಮನವಿಯನ್ನು ಮಾಡಿದ್ದೆ ಅದಕ್ಕೆ ಪಕ್ಷದ ಹಿರಿಯರು ಯಾರೂ ಕೂಡ ಸಮ್ಮತಿ ನೀಡಿರಲಿಲ್ಲ ಹಾಗಾಗಿ ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರಿಗೆ ಪತ್ರ ಬರೆದು ಈ ಬಾರಿ ನನ್ನ ಹೆಸರನ್ನು ಯಾವುದೇ ವಿಧಾನ ಸಭಾ ಕ್ಷೇತ್ರಕ್ಕೆ ಪರಿಗಣಿಸದಂತೆ ಮನವಿ ಮಾಡಿದ್ದೆ ಅಲ್ಲದೆ ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗೆ ಪೂರ್ಣ ಬಹುಮತವನ್ನು ಕೊಟ್ಟು ಸಂಪೂರ್ಣ ಬಹುಮತ ತರುವಲ್ಲಿ ಹೆಚ್ಚಿನ ಪ್ರಯತ್ನ ಮಾಡುವ ಹಂಬಲದಲ್ಲಿ ಈ ನಿರ್ಧಾರಕ್ಕೆ ಬಂದಿದ್ದೇನೆ ಹಾಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಇಲ್ಲಿಯವರೆಗೆ ಸಿಕ್ಕಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಸಿಗಬೇಕು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಲಕ್ಷಾಂತರ ಯುವಕರು ಕೆಲಸ ಮಾಡುತ್ತಿದ್ದಾರೆ. ನಾನು ಮತ್ತೆ ಪಕ್ಷ ಸಂಘಟನೆಯತ್ತ ಹೋಗುತ್ತೇನೆ. ರಾಜ್ಯದಲ್ಲಿ ಪೂರ್ಣ ಬಹುಮತ ತರುವುದರ ಜೊತೆಗೆ ಮತ್ತೆ 2024ರಲ್ಲಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸಬೇಕು ಎಂದು ತಿಳಿಸಿದರು.

RELATED TOPICS:
English summary :I announced my retirement of my own accord: Eshwarappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...